ಕರಾವಳಿ

ಭೀಕರ ರಸ್ತೆ ಅಪಘಾತ: ಯುವಕ ದಾರುಣ ಮೃತ್ಯು

ಪುತ್ತೂರು:ದ್ವಿಚಕ್ರ ವಾಹನ ಹಾಗೂ ಕಾರು ನಡುವೆ ಅಪಘಾತ ಸಂಭವಿಸಿ ಸ್ಕೂಟರ್ ಸವಾರ ಮೃತಪಟ್ಟ ಘಟನೆ ಮಿತ್ತೂರು ಸಮೀಪದ ಪರ್ಲೋಟ್ಟು ಎಂಬಲ್ಲಿ ಆ.25ರಂದು ನಡೆದಿದೆ.



ಮುರ ಶಾಂತಿನಗರ ನಿವಾಸಿ ಹರ್ಷದ್ (32) ಮೃತಪಟ್ಟವರು.
ಕಬಕದಿಂದ ಮಾಣಿ ಕಡೆಗೆ ಹರ್ಷದ್ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಮಾಣಿಯಿಂದ ಕಬಕ ಕಡೆಗೆ ಬರುತ್ತಿದ್ದ ಕಾರು ಢಿಕ್ಕಿ ಹೊಡೆದಿದೆ. ಪರಿಣಾಮ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡ ಹರ್ಷದ್ ರನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಅಪಘಾತದ ತೀವ್ರತೆಗೆ  ದ್ವಿಚಕ್ರ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರು ಜಖಂಗೊಂಡಿದೆ.
ಮೃತರು ತಾಯಿ, ಪತ್ನಿ, ಇಬ್ಬರು ಪುಟ್ಟ ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.
ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!