ಕ್ರೈಂಜಿಲ್ಲೆ

ಕೆಯ್ಯೂರು, ಕಟ್ಟತ್ತಾರು ಪರಿಸರದಲ್ಲಿ ನಡೆದ ಕಳ್ಳತನ ಪ್ರಕರಣ: ಆರೋಪಿ ಬಂಧನ

ಪುತ್ತೂರು: ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ೨೦೨೧ನೇ ಜುಲೈ ತಿಂಗಳಿನಲ್ಲಿ ಕೆಯ್ಯೂರು ಗ್ರಾಮದ ಕಟ್ಟತ್ತಾರು, ಕೆಯ್ಯೂರು, ಮಾಡಾವು ಪರಿಸರದಲ್ಲಿ ಸರಣಿ ಮನೆ ಕಳ್ಳತನ ನಡೆದಿದ್ದು, ಈ ಬಗ್ಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆಯಲ್ಲಿತ್ತು, ಸದ್ರಿ ಕಳ್ಳತನ ಪ್ರಕರಣವನ್ನು ಭೇದಿಸಿದ ಪುತ್ತೂರು ಗ್ರಾಮಾಂತರ ಠಾಣಾ ಪಿಎಸ್‌ಐ ಉದಯರವಿ.ಎಂ.ವೈ ಮತ್ತು ರಾಮಕೃಷ್ಣರವರ ನೇತೃತ್ವದ ತಂಡ ಆರೋಪಿ ಕೇರಳ ರಾಜ್ಯದ ಕೊಲ್ಲಂ ಕುಟ್ಟಿಪರಂಬ್ ಪರಂಬಿಲ್ ನಿವಾಸಿ ಮಹಮ್ಮದ್.ಕೆ.ಯು (೪೨ ವ) ಎಂಬಾತನನ್ನು ದಸ್ತಗಿರಿ ಮಾಡಿ ವಿಚಾರಣೆ ನಡೆಸಿದ ಸಮಯ ಆರೋಪಿಯು ಕಳೆದ ವರ್ಷ ಬೆಳ್ಳಾರೆ ಠಾಣಾ ವ್ಯಾಪ್ತಿಯ ಸವಣೂರು ಹಾಗೂ ಬೆಳಂದೂರಿನ ಪಳ್ಳತ್ತಾರು ಪರಸರಗಳಲ್ಲಿ ಮನೆ ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ದು, ಈತನಿಂದ ಸುಮಾರು ೨,೫೦,೦೦೦ /- ರೂ ಮೌಲ್ಯದ ಚಿನ್ನಾಭರಣ ಹಾಗೂ ಕಳವುಗೈದ ಮೋಟಾರು ಸೈಕಲ್ ಅನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಅಲ್ಲದೇ ಈತನು ಕೊಣಾಜೆ, ವಿಟ್ಲ, ಬಂಟ್ವಾಳ, ಪುಂಜಾಲಕಟ್ಟೆ ಪರಸರಗಳಲ್ಲಿ ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿರುತ್ತಾನೆ. ಈತನ ವಿರುದ್ಧ ಈಗಾಗಲೇ ಕೇರಳ ರಾಜ್ಯದಲ್ಲಿ ೧೨೦ ಕ್ಕಿಂತಲೂ ಹೆಚ್ಚು ಮನೆ ಕಳ್ಳತನ ಪ್ರಕರಣಗಳು ದಾಖಲಾಗಿರುತ್ತದೆ.

ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸ್ ಅಧೀಕ್ಷಕ ಋಷಿಕೇಶ್ ಸೋನಾವಣೆ, ಹಚ್ಚುವರಿ ಪೊಲೀಸ್ ಅಧೀಕ್ಷಕ ಕುಮಾರ್ ಚಂದ್ರ ಪುತ್ತೂರು, ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಡಾ.ವೀರಯ್ಯ ಹಿರೇಮಠ, ಡಿ.ಸಿ.ಆರ್.ಬಿ ಪೊಲೀಸ್ ಉಪಾಧೀಕ್ಷಕ ಡಾ: ಗಾನ ಪಿ ಕುಮಾರ್ ಮತ್ತು ಪುತ್ತೂರು ಗ್ರಾಮಾಂತರ ಪೊಲೀಸ್ ವೃತ್ತ ನಿರೀಕ್ಷಕ ರವಿ.ಬಿ.ಎಸ್ ರವರ ಮಾರ್ಗದರ್ಶನದಲ್ಲಿ ಪುತ್ತೂರು ಗ್ರಾಮಾಂತರ ಠಾಣಾ ಪಿಎಸ್‌ಐ ಉದಯರವಿ ಎಂ.ವೈ ಮತ್ತು ರಾಮಕ್ಕಷ್ಣ ,ಸಿಬ್ಬಂದಿಗಳಾದ ಪ್ರೊ. ಪಿಎಸ್‌ಐ ಗಳಾದ ಕಾರ್ತಿಕ್ ಮತ್ತು ಭವಾನಿ, ಎಎಸ್‌ಐ ಮುರುಗೇಶ್, ಹೆಚ್.ಸಿಗಳಾದ ವರ್ಗೀಸ್, ದೇವರಾಜ್, ಅದ್ರಾಮ್, ಪ್ರವೀಣ್ ರೈ, ಪ್ರಶಾಂತ್, ಸ್ಕರಿಯ, ಪ್ರಶಾಂತ್ ರೈ, ಪಿಸಿ ಹರ್ಷಿತ್‌ರವರು ಸಹಕರಿಸಿದ್ದರು.

Leave a Reply

Your email address will not be published. Required fields are marked *

error: Content is protected !!