ಕಡಬ: ಮರದ ಬಾಕ್ಸ್ ಒಡೆದು ₹84,800/- ನಗದು ಕಳವು–ಪ್ರಕರಣ ದಾಖಲು
ಕಡಬ: ಕಡಬ ಗ್ರಾಮ ಅಡ್ಡಗದ್ದೆ ನಿವಾಸಿ ತಮನ್ನಾ ಜಬೀನ್ (43) ಎಂಬವರು ನೀಡಿದ ದೂರಿನಂತೆ, ಅವರು ತಮ್ಮ ಗಂಡ, ಮಕ್ಕಳು ಹಾಗೂ ಇತರೆ ಕುಟುಂಬ ಸದಸ್ಯರೊಂದಿಗೆ ಕಡಬ ಅಡ್ಡಗದ್ದೆಯಲ್ಲಿರುವ ಗಂಡನ ಮನೆಯಲ್ಲಿ ವಾಸವಾಗಿದ್ದು
ತಮ್ಮ ಕೊಠಡಿಯಲ್ಲಿದ್ದ ಮರದ ಬಾಕ್ಸ್‌ನಲ್ಲಿ ಹಣವನ್ನು ಸಂಗ್ರಹಿಸಿಟ್ಟಿದ್ದರು. ದಿನಾಂಕ 18.08.2026 ರಂದು ಕಾರ್ಯಕ್ರಮವೊಂದರ ನಿಮಿತ್ತ ತಮ್ಮ ಗಂಡ ಹಾಗೂ ಮಕ್ಕಳೊಂದಿಗೆ ಉಡುಪಿಗೆ ತೆರಳಿ, ಅದೇ ದಿನ ಮನೆಗೆ ಹಿಂದಿರುಗಿದ್ದರು.

ದಿನಾಂಕ 24.08.2026 ರಂದು ಮರದ ಬಾಕ್ಸ್‌ನಲ್ಲಿಟ್ಟಿದ್ದ ಹಣವನ್ನು ತೆಗೆಯಲು ಹೋದಾಗ, ಬಾಕ್ಸ್ ಒಡೆದ ಸ್ಥಿತಿಯಲ್ಲಿ ಕಂಡುಬಂದಿದೆ. ಪರಿಶೀಲಿಸಿದಾಗ, ಬಾಕ್ಸ್‌ನಲ್ಲಿ ಸಂಗ್ರಹಿಸಿಟ್ಟಿದ್ದ ಒಟ್ಟು ₹84,800/- ನಗದು ಹಣ ಕಳವಾಗಿರುವುದು ಗಮನಕ್ಕೆ ಬಂದಿರುತ್ತದೆ.
ಈ ಬಗ್ಗೆ ನೀಡಿದ ದೂರಿನ ಮೇರೆಗೆ ಕಡಬ ಪೊಲೀಸ್ ಠಾಣೆಯಲ್ಲಿ ಅ.ಕ್ರ. 101/2026, ಕಲಂ 305 BNS-2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.



