ಕರಾವಳಿ

ಸೆ.6: ಕುಂಬ್ರ ಕೆ.ಐ.ಸಿ ರೆಸಿಡೆನ್ಶಿಯಲ್ ಪಿಯು ಸೈನ್ಸ್ ಕಾಲೇಜು–ಹೈಸ್ಕೂಲ್ ಕಟ್ಟಡಕ್ಕೆ ಶಿಲಾನ್ಯಾಸ

ಪುತ್ತೂರು: ಕರ್ನಾಟಕ ಇಸ್ಲಾಮಿಕ್ ಸೆಂಟರ್ (ಕೆ.ಐ.ಸಿ.) ಕುಂಬ್ರ ಇದರ ಅಧೀನದಲ್ಲಿ, ಕೆ.ಐ.ಸಿ. ಜಿಸಿಸಿ ಸಮಿತಿಯ ಪ್ರಾಯೋಜಕತ್ವದಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಕೆ.ಐ.ಸಿ. ರೆಸಿಡೆನ್ಶಿಯಲ್ ಪಿಯು ಸೈನ್ಸ್ ಕಾಲೇಜು ಹಾಗೂ ಹೈಸ್ಕೂಲ್ ಕಟ್ಟಡದ ಶಂಕುಸ್ಥಾಪನೆ ಸಮಾರಂಭ ಸೆಪ್ಟೆಂಬರ್ 6ರಂದು ಬೆಳಿಗ್ಗೆ 10 ಗಂಟೆಗೆ ಕುಂಬ್ರದಲ್ಲಿ ನಡೆಯಲಿದೆ.



ಕೆ.ಐ.ಸಿ. ಅಧ್ಯಕ್ಷ ಕೆ.ಪಿ. ಅಹಮದ್ ಹಾಜಿ ಆಕರ್ಷಣ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ಸೈಯದ್ ಅಲಿ ತಂಙಳ್ ಕುಂಬೋಳ್, ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಸೇರಿದಂತೆ ವಿವಿಧ ಸಾಮಾಜಿಕ, ಧಾರ್ಮಿಕ ಹಾಗೂ ರಾಜಕೀಯ ಮುಖಂಡರು ಭಾಗವಹಿಸಲಿದ್ದಾರೆ.
ಬೆಳಿಗ್ಗೆ 10 ಗಂಟೆಗೆ ಸರಿಯಾಗಿ ಕಾರ್ಯಕ್ರಮ ಆರಂಭಗೊಳ್ಳಲಿದ್ದು, ಸಾರ್ವಜನಿಕರು ಹಾಗೂ ಬಂಧುಮಿತ್ರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಮಾರಂಭವನ್ನು ಯಶಸ್ವಿಗೊಳಿಸುವಂತೆ ಸಂಘಟಕರು ವಿನಂತಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!