ಕರಾವಳಿಕ್ರೈಂ

ಕುದ್ಮಾರು: ಪತ್ನಿಗೆ ಹಲ್ಲೆ, ಪತಿ ವಿಷ ಸೇವಿಸಿ ಅಸ್ವಸ್ಥ


ಪುತ್ತೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೊಬ್ಬರು ಪತ್ನಿಗೆ ಹಲ್ಲೆ ನಡೆಸಿದ ಘಟನೆ ಸೆ.6ರಂದು ಕಡಬ ತಾಲೂಕಿನ ಕುದ್ಮಾರು ಗ್ರಾಮದಲ್ಲಿ ನಡೆದಿದೆ.

ಕುದ್ಮಾರು ನಿವಾಸಿ ಸುಚಿತ್ರಾ ಪಿ.ಜೆ. (38) ಎಂಬವರು ನೀಡಿದ ದೂರಿನಂತೆ, ಸುಮಾರು ನಾಲ್ಕು ವರ್ಷಗಳ ಹಿಂದೆ ಚಿದಾನಂದ ಕೆ. ಎಂಬವರೊಂದಿಗೆ ವಿವಾಹವಾಗಿದ್ದು, ಸೆ.6ರಂದು ಬೆಳಗ್ಗೆ ಇಬ್ಬರ ನಡುವೆ ಕೌಟುಂಬಿಕ ವಿಚಾರಕ್ಕೆ ಸಂಬಂಧಿಸಿದಂತೆ ಕಲಹ ಉಂಟಾಗಿದೆ. ಈ ವೇಳೆ ಚಿದಾನಂದ ಕೆ. ಅವರು ಪತ್ನಿಗೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.



ಹಲ್ಲೆಯ ಪರಿಣಾಮ ಸುಚಿತ್ರಾ ಅವರು ಕುಸಿದುಬಿದ್ದಿದ್ದು, ನೆರೆಮನೆಯವರು ಅವರನ್ನು ಉಪಚರಿಸಿ ಬಳಿಕ ಸುಳ್ಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.
ಇತ್ತ ಪತ್ನಿಗೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಚಿದಾನಂದ ಕೆ. ಅವರು ವಿಷ ಸೇವಿಸಿ ಅಸ್ವಸ್ಥರಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.



ಈ ಕುರಿತು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಅ.ಕ್ರ. 56/2026ರಂತೆ ಬಿ.ಎನ್.ಎಸ್. 2023ರ ಕಲಂ 85, 115(2) ಹಾಗೂ 352ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಚಿಕಿತ್ಸೆಯಿಂದ ಬಿಡುಗಡೆಯಾದ ಬಳಿಕ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!