ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಮೂವರು ಬಂಧನ
ವಿಟ್ಲ: ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿಯಾಗಿರುವ ಸಂತ್ರಸ್ತ ಬಾಲಕನ ದೂರಿನ ಮೇರೆಗೆ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

2026ರ ಫೆಬ್ರವರಿಯಿಂದ ಆಗಸ್ಟ್ ತಿಂಗಳ ಅವಧಿಯಲ್ಲಿ ಆರೋಪಿಗಳಾದ ಜವಾದ್, ಶಹೀದ್, ರಿಯಾಝ್ @ ಅಬ್ದುಲ್ ಗಫೂರ್ ಹಾಗೂ ಇತರ ಮೂವರು ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ಸಂತ್ರಸ್ತ ಬಾಲಕನು ನೀಡಿದ ದೂರಿನಲ್ಲಿ ಆರೋಪಿಸಲಾಗಿದೆ.
ಈ ಕುರಿತು ಸೆಪ್ಟೆಂಬರ್ 4, 2026ರಂದು ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ದೂರಿನ ಆಧಾರದ ಮೇಲೆ ಅ.ಕ್ರ. 185/2026 ರಿಂದ 190/2026ರವರೆಗೆ ಒಟ್ಟು ಆರು ಪ್ರಕರಣಗಳನ್ನು ಪೋಕ್ಸೋ ಕಾಯ್ದೆ-2012ರ ಕಲಂ 4(2), 5(m), 6 ಹಾಗೂ 8ರ ಅಡಿಯಲ್ಲಿ ದಾಖಲಿಸಲಾಗಿದೆ.
ಪ್ರಕರಣಗಳ ತನಿಖೆ ಕೈಗೊಂಡ ಪೊಲೀಸರು ಆರೋಪಿಗಳ ಪೈಕಿ ಜವಾದ್, ಶಹೀದ್ ಹಾಗೂ ರಿಯಾಝ್ @ ಅಬ್ದುಲ್ ಗಫೂರ್ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ.


