ಕರಾವಳಿಕ್ರೈಂ

ಪುತ್ತೂರು: ಮಹಿಳೆಗೆ ಲೈಂಗಿಕ ಕಿರುಕುಳ: ಆರೋಪಿ ವಶಕ್ಕೆ



ಪುತ್ತೂರು: ಕೆಲಸದ ನಿಮಿತ್ತ ಮನೆಯಿಂದ ಹೊರಟಿದ್ದ ಮಹಿಳೆಯೊಬ್ಬರಿಗೆ ಆಟೋ ರಿಕ್ಷಾದಲ್ಲಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಆಟೋ ಚಾಲಕನ ವಿರುದ್ಧ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಸಾಂದರ್ಭಿಕ ಚಿತ್ರ



ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ನಿವಾಸಿಯಾಗಿರುವ ಸಂತ್ರಸ್ತ ಮಹಿಳೆ ಸೆ.9ರಂದು ಬೆಳಗ್ಗೆ ಕೆಲಸದ ನಿಮಿತ್ತ ಮನೆಯಿಂದ ಹೊರಟಿದ್ದರು. ಪರಿಚಯದ ಬಾಲಕೃಷ್ಣ ಎಂಬವರು ಚಾಲಕರಾಗಿರುವ ಆಟೋ ರಿಕ್ಷಾದಲ್ಲಿ ಪುತ್ತೂರು ಕಡೆಗೆ ತೆರಳುತ್ತಿದ್ದ ವೇಳೆ, ಆರೋಪಿ ಚಾಲಕ ಮಾರ್ಗ ಬದಲಿಸಿ ರಿಕ್ಷಾವನ್ನು ಕುರಿಯ ಎಂಬಲ್ಲಿಗೆ ಕೊಂಡೊಯ್ದು ನಿಲ್ಲಿಸಿದ್ದಾನೆ ಎನ್ನಲಾಗಿದೆ.



ಬಳಿಕ ಸಂತ್ರಸ್ತ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿರುವುದಾಗಿ ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 117/2026, ಕಲಂ 74, 75, 64 ಬಿಎನ್‌ಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಆರೋಪಿ ಬಾಲಕೃಷ್ಣನನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ಮುಂದುವರಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!