ಕರಾವಳಿಕ್ರೈಂ

ಬೆಳ್ತಂಗಡಿ: ಕಟ್ಟಡದ ಅವಶೇಷ ಮೈಮೇಲೆ ಬಿದ್ದು ಯುವಕ ಮೃತ್ಯು


ಬೆಳ್ತಂಗಡಿ:ಕಟ್ಟಡ ತೆರವು ಕಾರ್ಯಾಚರಣೆ ವೇಳೆ ಕಟ್ಟಡದ ಅವಶೇಷ ಮೈಮೇಲೆ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಬೆಳ್ತಂಗಡಿ ನಗರದ ಮೂರು ಮಾರ್ಗದ ಬಳಿ ಸೆ.17ರಂದು ಸಂಜೆ ವರದಿಯಾಗಿದೆ.


ಕಡಬ ತಾಲೂಕಿನ ಕೋಡಿಂಬಾಳ ಗ್ರಾಮದ ಅಲಿ ಎಂಬವರ ಪುತ್ರ ಝುಬೈರ್(22) ಮೃತಪಟ್ಟವರು.
ಮೂರು ಮಾರ್ಗದ ಬಳಿಯ ಬೆಳ್ತಂಗಡಿ ಮಹಿಳಾ ಗ್ರಾಹಕರ ಸಹಕಾರಿ ಸಂಘಕ್ಕೆ ಸೇರಿದ ಮಳಿಗೆಯ ಕಟ್ಟಡ ತೆರವು ಕಾರ್ಯಾಚರಣೆಯ ವೇಳೆ ಈ ಅವಘಡ ಸಂಭವಿಸಿದೆ. ಕಟ್ಟಡದ ಮೇಲ್ಬಾಗದಲ್ಲಿ ತುಂಡರಿಸುತ್ತಿದ್ದ ವೇಳೆ ಸಿಮೆಂಟ್ ರಾಕ್‌ವೊಂದು ಝುಬೈರ್ರ ಮೈಮೇಲೆ ಬಿದ್ದಿದೆ. ಇದರಿಂದ ಗಂಭೀರ ಗಾಯಗೊಂಡಿದ್ದ ಅವರನ್ನು ತಕ್ಷಣ ಸ್ಥಳೀಯರ ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ಕರೆದೊಯ್ದರು ಅಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದರು.
ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Leave a Reply

Your email address will not be published. Required fields are marked *

error: Content is protected !!