ಬಂಟ್ವಾಳ: ಪೋಕ್ಸೋ ಪ್ರಕರಣದಲ್ಲಿ ಆರೋಪಿಗೆ 20 ವರ್ಷ ಜೈಲು ಶಿಕ್ಷೆ ಪ್ರಕಟ
ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ವರದಿಯಾಗಿದ್ದ ಅ.ಕ್ರ : 141/2025, ಕಲಂ: 4,6,8,12,19(1)(b), 21 ಪೋಕ್ಸೋ ಆಕ್ಟ್ -2012 & ಕಲಂ : 64(2)(f), 75 r/w 3(5)BNS-2023 ಪ್ರಕರಣದಲ್ಲಿ ತನಿಖಾಧಿಕಾರಿಗಳಾದ ಹಾಗೂ ಬಂಟ್ವಾಳ ನಗರ ಠಾಣಾ ಪೊಲೀಸ್ ನಿರೀಕ್ಷಕರಾದ ಅನಂತ ಪದ್ಮನಾಭರವರು ಪ್ರಕರಣದ ತನಿಖೆ ನಡೆಸಿ, ಅಗತ್ಯ ಸಾಕ್ಷಿಗಳನ್ನು ಕಲೆಹಾಕಿ ಆರೋಪಿ ಬೆಳ್ತಂಗಡಿ ಗುರುವಾಯನಕೆರೆ ನಿವಾಸಿ ಅಬ್ದುಲ್ ಲತಿಫ್ ಹಾಗೂ ಇತರೆ ಇಬ್ಬರ ವಿರುದ್ದ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.

ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ FTSC-2, ಮಂಗಳೂರು ಇಲ್ಲಿ ಪ್ರಕರಣದ ವಿಚಾರಣೆ ನಡೆದು ಆರೋಪಿತನಾದ ಅಬ್ದುಲ್ ಲತಿಫ್ ಎಂಬಾತನ ವಿರುದ್ದದ ಆರೊಪಗಳು ಸಾಬೀತಾದ ಹಿನ್ನೆಲೆಯಲ್ಲಿ, ನ್ಯಾಯಾಧೀಶರಾದ ಶ್ರೀ ಮಾನು ಕೆ.ಎಸ್ ರವರು ದಿನಾಂಕ 19.9.2026ರಂದು ಆರೋಪಿಗೆ 20 ವರ್ಷಗಳ ಕಠಿಣ ಕಾರಾಗೃಹ ವಾಸ ಮತ್ತು 80000 ದಂಡ ವಿಧಿಸಿ ಅದೇಶಿಸಿರುತ್ತಾರೆ.
ಸರ್ಕಾರಿ ಅಭಿಯೋಜಿಕರಾದ ಸಹನಾದೇವಿ ಬೋಳೂರು ರವರು ನ್ಯಾಯಲಯದಲ್ಲಿ ವಾದ ಮಂಡಿಸಿರುತ್ತಾರೆ.


