ಸೌಜನ್ಯಾ ಅತ್ಯಾಚಾರ, ಕೊಲೆ ಪ್ರಕರಣ ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ
ಧರ್ಮಸ್ಥಳದ ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಸೆ.21ರಂದು ಆದೇಶಿಸಿದ್ದು, ತನಿಖೆ ಪೂರ್ಣಗೊಳಿಸಲು ಮೂರು ತಿಂಗಳ ಗಡುವು ವಿಧಿಸಿದೆ.

ಈ ಪ್ರಕರಣದ ತನಿಖೆ ನಡೆಸಿದ್ದ ಕೇಂದ್ರ ತನಿಖಾ ದಳ (ಸಿಬಿಐ) ಆರೋಪಿಗಳನ್ನು ಖುಲಾಸೆಗೊಳಿಸಿತ್ತು. ಇದನ್ನು ಪ್ರಶ್ನಿಸಿ ಸೌಜನ್ಯಾ ತಾಯಿ ಕುಸುಮಾವತಿ ಗೌಡ ಅವರು ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದರು.
ಪ್ರಕರಣವನ್ನು ಮರುತನಿಖೆ ನಡೆಸುವಂತೆ ಕೋರಿ ಸಲ್ಲಿಸಿದ್ದ ಅವರ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು. ಬಳಿಕ ಕುಸುಮಾವತಿ ಗೌಡ ಅವರು ಸುಪ್ರೀಂ ಕೋರ್ಟ್ನಲ್ಲಿ ವಿಶೇಷ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ವೇಳೆ ಸಿಬಿಐ ತನಿಖೆಯ ಬಗ್ಗೆ ಸುಪ್ರೀಂ ಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು ಮರು ತನಿಖೆಗೆ ಆದೇಶಿಸಿದೆ


