ಕರಾವಳಿಕ್ರೈಂ

17 ಜಾನುವಾರುಗಳ ಅಕ್ರಮ ಸಾಗಾಟ:
ಲಾರಿ ವಶಕ್ಕೆ, ಆರೋಪಿ ಬಂಧನ



ಮಂಗಳೂರು: ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ EICHER ಲಾರಿಯನ್ನು ಕಂಕನಾಡಿ ನಗರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಲಾರಿಯಲ್ಲಿದ್ದ 17 ಜಾನುವಾರುಗಳನ್ನು ರಕ್ಷಿಸಿದ್ದಾರೆ.



ಸೆ.22ರಂದು ಬೆಳಗಿನ ಜಾವ ಪಿ.ಎಸ್.ಐ ಹಾಗೂ ಸಿಬ್ಬಂದಿ  ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ ಜಾನುವಾರುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಲಭಿಸಿತ್ತು. ಬಳಿಕ ಆಡ್ಯಾರು ಕಡೆಯಿಂದ ಮಂಗಳೂರು ನಗರದತ್ತ ಬರುತ್ತಿದ್ದ ಲಾರಿಯನ್ನು ಬೆನ್ನಟ್ಟಿ ಪಡೀಲ್ ಟೊಯೋಟಾ ಕಾರ್ ಶೋರೂಮ್ ಎದುರು ತಡೆದು ಪರಿಶೀಲನೆ ನಡೆಸಲಾಯಿತು.


ಲಾರಿಯಲ್ಲಿದ್ದ 17 ಜಾನುವಾರುಗಳನ್ನು ಯಾವುದೇ ಸುರಕ್ಷತಾ ಕ್ರಮಗಳಿಲ್ಲದೆ, ಒಂದರ ಮೇಲೊಂದು ಬಿಗಿಯಾಗಿ ಹಗ್ಗಗಳಿಂದ ಕಟ್ಟಲಾಗಿದ್ದು, ಉಸಿರಾಟಕ್ಕೂ ತೊಂದರೆಯಾಗುವ ರೀತಿಯಲ್ಲಿ ಸಾಗಿಸಲಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.



ಈ ಸಂಬಂಧ ಸಾದಿಕ್ (23) ಎಂಬಾತನನ್ನು ಬಂಧಿಸಲಾಗಿದ್ದು, 17 ಜಾನುವಾರುಗಳು, ಲಾರಿ ಹಾಗೂ ಆರೋಪಿಯ ಮೊಬೈಲ್ ಫೋನ್ ಸೇರಿದಂತೆ ಸಂಬಂಧಿತ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಸುಬಾನ್ ಹಾಗೂ ರೆಹಮಾನ್ ಎಂಬವರು ಪರಾರಿಯಾಗಿದ್ದು, ಅವರ ಪತ್ತೆಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.

Leave a Reply

Your email address will not be published. Required fields are marked *

error: Content is protected !!