ಕರಾವಳಿಕ್ರೈಂ

ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ – ಮಗುವಿಗೆ ಜನ್ಮ; ಪ್ರಕರಣ ದಾಖಲು


ವಿಟ್ಲ: ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯವೆಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ  ಪ್ರಕರಣ ದಾಖಲಾಗಿದೆ.


ಪ್ರಕರಣದ ಅಪ್ರಾಪ್ತ ಸಂತ್ರಸ್ತ ಬಾಲಕಿಗೆ ಕೇರಳ ರಾಜ್ಯದ ನಿವಾಸಿಯಾಗಿರುವ ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕನ ಪರಿಚಯವಾಗಿದ್ದು, ಇಬ್ಬರೂ ಮೊಬೈಲ್ ಮೂಲಕ ಸಂಪರ್ಕದಲ್ಲಿದ್ದರು ಎನ್ನಲಾಗಿದೆ. ದಿನಾಂಕ 21-12-2025 ರಂದು ಸದ್ರಿ ಬಾಲಕನು ಸಂತ್ರಸ್ತ ಬಾಲಕಿಯನ್ನು ತನ್ನ ಮನೆಗೆ ಕರೆಸಿಕೊಂಡು ಲೈಂಗಿಕ ದೌರ್ಜನ್ಯವೆಸಗಿದ್ದಾನೆ ಎಂದು ಪ್ರಕರಣದಲ್ಲಿ ತಿಳಿಸಲಾಗಿದೆ.


ದಿನಾಂಕ 08-09-2026 ರಂದು ಅಪ್ರಾಪ್ತ ಬಾಲಕಿಯ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಮನೆಯವರು ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದು, 09-09-2026 ರಂದು ಆಕೆ ಮಗುವಿಗೆ ಜನ್ಮ ನೀಡಿರುವುದು ಬೆಳಕಿಗೆ ಬಂದಿದೆ.
ಈ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಶೂನ್ಯ ಅ.ಕ್ರ. 01/2026, ಕಲಂ 4, 5(J)(ii), 5(L), 6 ಪೋಕ್ಸೋ ಕಾಯ್ದೆ–2012 ಹಾಗೂ ಕಲಂ 64(2)(m) BNS–2023 ರಂತೆ ಪ್ರಕರಣ ದಾಖಲಿಸಲಾಗಿದೆ.
ಘಟನೆ ನಡೆದ ಸ್ಥಳದ ಆಧಾರದ ಮೇಲೆ ಪ್ರಕರಣವನ್ನು ಸಂಬಂಧಿಸಿದ ಪೊಲೀಸ್ ಠಾಣೆಗೆ ವರ್ಗಾಯಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!