ರಾಜಕೀಯರಾಷ್ಟ್ರೀಯ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾ‌ರ್ ವಿರುದ್ಧ ವಾಗ್ದಾಳಿ: ಪಶ್ಚಿಮ ಬಂಗಾಳದಲ್ಲಿ ಮರುಮತದಾನ ನಡೆಸುವಂತೆ ಮಮತಾ ಬ್ಯಾನರ್ಜಿ ಆಗ್ರಹ

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ 2026ರ ವಿಧಾನಸಭಾ
ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿರುವ ಮಾಜಿ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕಿ ಮಮತಾ ಬ್ಯಾನರ್ಜಿ, ರಾಜ್ಯದಾದ್ಯಂತ ಮರುಮತದಾನ ನಡೆಸುವಂತೆ ಆಗ್ರಹಿಸಿದ್ದಾರೆ.

ಚುನಾವಣೆಯನ್ನು ಮೇಲ್ವಿಚಾರಣೆ ಮಾಡಿದ್ದ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾ‌ರ್ ಅವರನ್ನು ಬಂಧಿಸಿ, ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
“ಬಿಜೆಪಿ ಮತ್ತು ಜ್ಞಾನೇಶ್‌ ಕುಮಾ‌ರ್ ಸೇರಿ ಜಂಟಿ ಸಂಸ್ಥೆಯಂತೆ ಕೆಲಸ ಮಾಡಿದ್ದಾರೆ. ಇಬ್ಬರೂ ಸೇರಿ ಬಂಗಾಳ ಚುನಾವಣೆಯಲ್ಲಿ ಮೋಸ ಮಾಡಿದ್ದಾರೆ ಎಂದು ಆರೋಪಿಸಿರುವ ಅವರು ನಿಮಗೇನಾದರೂ ನೈತಿಕತೆ ಇದ್ದರೆ, ನಮ್ಮ ಚುನಾವಣೆಯನ್ನು ನಮಗೆ ಮರಳಿ ನೀಡಿ” ಎಂದು ವಾಗ್ದಾಳಿ ನಡೆಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!