ಜ್ಞಾನೇಶ್ ಕುಮಾರ್ ರಾಜೀನಾಮೆಗೆ 48 ಗಂಟೆಗಳ ಗಡುವು ನೀಡಿದ ಸಿಜೆಪಿ
ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್ ಜನತಾ ಪಾರ್ಟಿ 48 ಗಂಟೆಗಳ ಗಡುವು ನೀಡಿದೆ. ನಿಗದಿತ ಅವಧಿಯಲ್ಲಿ ರಾಜೀನಾಮೆ ನೀಡದಿದ್ರೆ ದೇಶಾದ್ಯಂತ ಪ್ರತಿಭಟನೆ ನಡೆಸುವುದಾಗಿ ಪಕ್ಷದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಎಚ್ಚರಿಕೆ ನೀಡಿದ್ದಾರೆ.

ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅಭಿಜೀತ್ ದೀಪ್ಕೆ, 48 ಗಂಟೆಗಳ ಒಳಗೆ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡದಿದ್ದರೆ ಸಿಜೆಪಿ ದೇಶಾದ್ಯಂತ ಹೋರಾಟ ನಡೆಸಲಿದೆ. ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ ನಾವು ಹಿಂದೆ ಸರಿಯೋದಿಲ್ಲ ಎಂದು ಎಚ್ಚರಿಸಿದ್ದಾರೆ. ಅಲ್ಲದೇ ಜ್ಞಾನೇಶ್ ಕುಮಾರ್ ಅವರ ವಿರುದ್ಧ ತೀವ್ರ ವಾಗ್ದಾಳಿ ಕೂಡಾ ನಡೆಸಿದರು.



