ಮಾಣಿ: ಭೀಕರ ಅಪಘಾತ, ಮಹಿಳೆ ಮೃತ್ಯು-ಮೂವರಿಗೆ ಗಾಯ
ಮಾಣಿ: ಆಲ್ಟೋ ಕಾರು ಹಾಗೂ ಪಿಕಪ್ ನಡುವೆ ಸಂಭವಿಸಿದ ಭೀಕರ ಅಪಘಾತ ಸಂಭವಿಸಿ ಓರ್ವ ಮಹಿಳೆ ಮೃತಪಟ್ಟು , ಮೂವರು ಮಹಿಳೆಯರು ಗಂಭೀರವಾಗಿ ಗಾಯಗೊಂಡ ಘಟನೆ ಸೆ.28ರಂದು ಬೆಳಿಗ್ಗೆ ಮಾಣಿ ಹಳೀರ ಫ್ಲೈಓವರ್ ಸಮೀಪ ನಡೆದಿದೆ.

ಮಡಿಕೇರಿ ನಿವಾಸಿ ನಫೀಸಾ (55) ಮೃತಪಟ್ಟವರು ಎಂದು ತಿಳಿದುಬಂದಿದೆ. ಅಪಘಾತಕ್ಕೀಡಾದ ಆಲ್ಟೋ ಕಾರಿನಲ್ಲಿ ಚಾಲಕ ಸೇರಿದಂತೆ ಐವರು ಪ್ರಯಾಣಿಸುತ್ತಿದ್ದರು. ನಾಲ್ವರು ಮಹಿಳೆಯರು ಹಾಗೂ ಚಾಲಕ ಉಮ್ರಾ ತರಗತಿ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ಗಂಭೀರವಾಗಿ ಗಾಯಗೊಂಡ ಮೂವರು ಮಹಿಳೆಯರನ್ನು ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.



