ನ್ಯಾಯಾಲಯದ ಪ್ರಕ್ರಿಯೆ ಕುರಿತು ಸುಳ್ಳು ಮಾಹಿತಿ ಆರೋಪ: ವಕೀಲ ಪ್ರಸಾದ್ ವಿರುದ್ಧ ದೂರು
ಬಂಟ್ವಾಳ: ನ್ಯಾಯಾಲಯದ ಪ್ರಕ್ರಿಯೆ ಹಾಗೂ ಪ್ರಕರಣವೊಂದರ ತನಿಖೆಯ ಕುರಿತು ಉದ್ದೇಶಪೂರ್ವಕವಾಗಿ ಸುಳ್ಳು ಮಾಹಿತಿ ಮತ್ತು ಹೇಳಿಕೆಗಳನ್ನು ನೀಡಿ ನ್ಯಾಯಾಂಗ ವ್ಯವಸ್ಥೆಯನ್ನು ಅಪಮಾನಿಸಿದ್ದಾರೆ ಎಂಬ ಆರೋಪದಡಿ ವಕೀಲ ಪ್ರಸಾದ್ ಎಂಬವರ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಬಂಟ್ವಾಳ ಬಡಗಬೆಳ್ಳೂರು ನಿವಾಸಿ ಮಹಮ್ಮದ್ ಹನೀಫ್ ಎಂಬವರು ನೀಡಿದ ದೂರಿನಂತೆ, ಸೆ.28ರಂದು ಬಿ.ಸಿ.ರೋಡ್‌ನಲ್ಲಿ ಧಾರ್ಮಿಕ ಸಂಘಟನೆಯೊಂದರ ನೇತೃತ್ವದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ವಕೀಲ ಪ್ರಸಾದ್ ಭಾಷಣ ಮಾಡಿದ್ದರು. ಈ ವೇಳೆ ನ್ಯಾಯಾಲಯದ ಪ್ರಕ್ರಿಯೆ ಹಾಗೂ ಪ್ರಕರಣವೊಂದರ ತನಿಖೆಗೆ ಸಂಬಂಧಿಸಿದಂತೆ ಸುಳ್ಳು ಮಾಹಿತಿ ಹಾಗೂ ಹೇಳಿಕೆಗಳನ್ನು ನೀಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ದೂರಿನ ಆಧಾರದ ಮೇಲೆ ಬಂಟ್ವಾಳ ನಗರ ಠಾಣೆಯಲ್ಲಿ ದೂರರ್ಜಿ ದಾಖಲಿಸಿಕೊಂಡಿರುವ ಪೊಲೀಸರು, ಪ್ರಕರಣದ ಕುರಿತು ತನಿಖೆ ನಡೆಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.



