ಸುಳ್ಯ: ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ
ಸುಳ್ಯ: ಸುಳ್ಯ ಪೊಲೀಸ್ ಠಾಣೆಯ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ, ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಸುಳ್ಯ ಪೊಲೀಸರು ಬಂಧಿಸಿದ್ದಾರೆ.

ಸುಳ್ಯ ಕನಕಮಜಲು ನಿವಾಸಿ ಸುರೇಂದ್ರ ಎಂಬಾತನನ್ನು ಸುಳ್ಯ ಠಾಣೆಯ ಸಿಬ್ಬಂದಿಗಳಾದ HC 368 ರಾಜು ನಾಯ್ಕ್ ಡಿ. ಹಾಗೂ PC 1020 ಸೋಮಯ್ಯ ಹಿರೇಮಠ ಅವರು ಆಲಟ್ಟಿ ಎಂಬಲ್ಲಿ ದಸ್ತಗಿರಿ ಮಾಡಿದ್ದಾರೆ.
0ನಂತರ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

