ಪೆರುವಾಯಿ: ಕೋಳಿ ಅಂಕಕ್ಕೆ ದಾಳಿ, ನಾಲ್ವರು ವಶಕ್ಕೆ
ವಿಟ್ಲ: ಪೆರುವಾಯಿ ಗ್ರಾಮದ ಸರಕಾರಿ ಜಾಗದಲ್ಲಿ ಹಣವನ್ನು ಪಣವಾಗಿಟ್ಟು ಅಕ್ರಮವಾಗಿ ಕೋಳಿ ಅಂಕ ನಡೆಸುತ್ತಿದ್ದ ಸ್ಥಳಕ್ಕೆ ವಿಟ್ಲ ಪೊಲೀಸರು ಅ.2ರಂದು ದಾಳಿ ನಡೆಸಿದ್ದಾರೆ.

ಪೊಲೀಸ್ ಉಪನಿರೀಕ್ಷಕ ರಾಮಕೃಷ್ಣ ಅವರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆ ನಡೆಸಿ ಕೃಷಪ್ಪ (59), ಲಕ್ಷ್ಮಣ ನಾಯ್ಕ್ (38), ಶೋಬಿತ್ ರಾಜ್ (29) ಹಾಗೂ ಯುವರಾಜ್ (46) ಎಂಬ ನಾಲ್ವರನ್ನು ವಶಕ್ಕೆ ಪಡೆಯಲಾಗಿದೆ.
ಸ್ಥಳದಿಂದ ಕೋಳಿಗಳು, ₹3,050 ನಗದು ಹಾಗೂ ಕೋಳಿ ಅಂಕಕ್ಕೆ ಬಳಸುತ್ತಿದ್ದ ಕತ್ತಿಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ. 203/2026ರಂತೆ ಪ್ರಕರಣ ದಾಖಲಿಸಿ, KP Act, ಪ್ರಾಣಿ ಹಿಂಸೆ ತಡೆ ಕಾಯ್ದೆ ಹಾಗೂ BNS ಅಡಿಯಲ್ಲಿ ತನಿಖೆ ಮುಂದುವರಿಸಲಾಗಿದೆ.

