ಕರಾವಳಿಜಿಲ್ಲೆ

ಬೆಳ್ತಂಗಡಿ: ಅಡಿಕೆ ಕೊಯ್ಯುವ ವೇಳೆ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿ ಮೃತ್ಯು

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಅಡಿಕೆ ಕೊಯ್ಯುತ್ತಿದ್ದಾಗ ವಿದ್ಯುತ್‌ ತಂತಿಗೆ ದೋಟಿ ತಗುಲಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಧರ್ಮಸ್ಥಳ ಗ್ರಾಮದ ಅಜಿಕುರಿಯ ನಝೀರ್ (38ವ) ಎಂದು ಗುರುತಿಸಲಾಗಿದೆ.


ಅ.4ರಂದು ನಝೀರ್ ತನ್ನ ಮನೆಯ ಸಮೀಪದ ಮರದಿಂದ ದೋಟಿ ಬಳಸಿ ಅಡಿಕೆ ಕೊಯ್ಲು ಮಾಡುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಆಕಸ್ಮಿಕವಾಗಿ ಪಕ್ಕದಲ್ಲಿ ಹಾದು ಹೋಗುತ್ತಿದ್ದ ವಿದ್ಯುತ್ ತಂತಿಗೆ ದೋಟಿ ತಗುಲಿ, ಅವರಿಗೆ ತೀವ್ರ ವಿದ್ಯುತ್ ಶಾಕ್‌ ಹೊಡೆದು ಗಂಭೀರ ಗಾಯಗಳಾಗಿದ್ದವು.

ಅವರನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತು ಮತ್ತು ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಚಿಕಿತ್ಸೆಗೆ ಸ್ಪಂದಿಸದ ಕಾರಣ ಅವರು ಅ. 8ರಂದು ಬೆಳಿಗ್ಗೆ ನಿಧನರಾದರು.
ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!