ಪುತ್ತೂರು: ಅಕ್ರಮ ಗೋಸಾಗಾಟ ಪ್ರಕರಣದ ಆರೋಪಿಯ ಮನೆ, ಕೊಟ್ಟಿಗೆ ಜಪ್ತಿ
ಪುತ್ತೂರು: ಅಕ್ರಮ ಗೋಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಶಿವಪ್ರಸಾದ್ ಅವರ ಮನೆ ಹಾಗೂ ಕೊಟ್ಟಿಗೆ ಪರಿಸರವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ಅ.5ರಂದು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಕ್ರಮ ಗೋಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿತ್ತು. ಮನೆಯಲ್ಲಿದ್ದ ಜಾನುವಾರುಗಳನ್ನು ಅಗತ್ಯ ದಾಖಲೆ ಪತ್ರಗಳಿಲ್ಲದೆ ಅಕ್ರಮವಾಗಿ ಮಾರಾಟ ಮಾಡಿದ ಆರೋಪದ ಹಿನ್ನೆಲೆಯಲ್ಲಿ, ನಿಯಮಾನುಸಾರ ಕ್ರಮ ಕೈಗೊಂಡ ಪೊಲೀಸರು ಅ. 8ರಂದು ಮನೆ ಹಾಗೂ ಕೊಟ್ಟಿಗೆ ಪರಿಸರವನ್ನು ಜಪ್ತಿ ಮಾಡಿದ್ದಾರೆ.

