ಕರಾವಳಿಕ್ರೈಂ

ಮಂಗಳೂರು: ಪತ್ನಿಯನ್ನು ಚೂರಿಯಿಂದ ಇರಿದು ಕೊಲೆ, ಆರೋಪಿ ಅರೆಸ್ಟ್

ಮಂಗಳೂರು: ನಗರದ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಪಂಜಿಮೊಗರು ಗ್ರಾಮದ ಉರುಂಡಾಡಿಗುಡ್ಡೆಯಲ್ಲಿ ಪತ್ನಿಯನ್ನು ಚೂರಿಯಿಂದ ಇರಿದು ಕೊಲೆ ಮಾಡಿದ ಆರೋಪದ ಮೇಲೆ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ.



ಅ.12ರಂದು ಉರುಂಡಾಡಿಗುಡ್ಡೆಯ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಶಿವಲಿಂಗಪ್ಪ ಎಂಬಾತ ತನ್ನ ಪತ್ನಿ ಸೋನಾಲಿ ಅವರನ್ನು ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಚೂರಿಯಿಂದ ಇರಿದು ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಈ ಕುರಿತು ಕಾವೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 138/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 103(2) ಮತ್ತು 238ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.


ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಮಾರ್ಕಬನಹಳ್ಳಿ ನಿವಾಸಿ ಶಿವಲಿಂಗಪ್ಪ (40) ಎಂಬಾತನನ್ನು ಅ.12ರಂದು ಕಾವೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ಪ್ರಕರಣದ ತನಿಖೆ ಮುಂದುವರಿದಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!