ಕರಾವಳಿಕ್ರೀಡೆ

ಪುತ್ತೂರಿನ ಲಾಡ್ಜ್‌ನಲ್ಲಿ ಯುವಕನ ಮೇಲೆ ಹಲ್ಲೆ, ಮೂವರ ವಿರುದ್ಧ ಪ್ರಕರಣ ದಾಖಲು



ಪುತ್ತೂರು: ಪುತ್ತೂರಿನ ಲಾಡ್ಜ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವಕನಿಗೆ ಅವಾಚ್ಯವಾಗಿ ಬೈದು, ಜೀವ ಬೆದರಿಕೆ ಒಡ್ಡಿ ಹಲ್ಲೆ ನಡೆಸಿದ ಆರೋಪದ ಮೇರೆಗೆ ಮೂವರ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



ಕಡಬ ಕೊಯಿಲ ನಿವಾಸಿ ಮಹಮ್ಮದ್ ರಿಫಾಯಿ (27) ಎಂಬವರು ನೀಡಿದ ದೂರಿನ ಪ್ರಕಾರ, ಅ.17ರಂದು ರಾತ್ರಿ ಅವರು ಕೆಲಸ ಮಾಡುತ್ತಿದ್ದ ಲಾಡ್ಜ್‌ಗೆ ಬಂದ ಫಾರೂಕ್, ಸೋನು ಹಾಗೂ ಇಷಾನ್ ಎಂಬವರು ಅವಾಚ್ಯವಾಗಿ ಬೈದು, ಜೀವ ಬೆದರಿಕೆ ಹಾಕಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.



ಈ ಸಂಬಂಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 126/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 126(2), 352, 351(2) ಹಾಗೂ 115(2)ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!