ಕರಾವಳಿಕ್ರೈಂ

ಮಕ್ಕಳನ್ನು ಕೊಡಿಸುವುದಾಗಿ ಹೇಳಿ ದೇಣಿಗೆ ಸಂಗ್ರಹಕ್ಕೆ ಯತ್ನ: ಯುವಕನ ವಿರುದ್ಧ ಪ್ರಕರಣ ದಾಖಲು



ಪುತ್ತೂರು: ಕೊಡಿಂಬಾಡಿ ಗ್ರಾಮದ ಶಾಂತಿನಗರದಲ್ಲಿ ಬೆಂಗಳೂರಿನ ಫೌಂಡೇಶನ್ ಒಂದರ ಹೆಸರಿನಲ್ಲಿ ದೇಣಿಗೆ ಸಂಗ್ರಹಿಸುವ ನೆಪದಲ್ಲಿ ಮನೆಗೆ ಬಂದ ಅಪರಿಚಿತ ವ್ಯಕ್ತಿಯೋರ್ವ ಮಕ್ಕಳನ್ನು ಕೊಡಿಸುವುದಾಗಿ ಹೇಳಿ ಹಣ ಸಂಗ್ರಹಿಸಲು ಮುಂದಾದ ಘಟನೆ ನಡೆದಿದೆ.



ಈ ಬಗ್ಗೆ ಅನುಮಾನಗೊಂಡ ಸ್ಥಳೀಯರು ತಕ್ಷಣ 112 ತುರ್ತು ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ 112 ತುರ್ತು ಕರ್ತವ್ಯದಲ್ಲಿದ್ದ ಸಿಬ್ಬಂದಿಗಳು ವ್ಯಕ್ತಿಯನ್ನು ವಶಕ್ಕೆ ಪಡೆದು ಪುತ್ತೂರು ನಗರ ಪೊಲೀಸ್ ಠಾಣೆಗೆ ಕರೆತಂದಿದ್ದಾರೆ.



ವಿಚಾರಣೆ ವೇಳೆ ಆತ ಹಾಸನ ಜಿಲ್ಲೆಯ ಬೇಲೂರು ನಿವಾಸಿ ಗಣೇಶ್ (24) ಎಂದು ತಿಳಿದುಬಂದಿದೆ. ಘಟನೆಯ ಬಗ್ಗೆ ದೂರು ನೀಡಲು ದೂರುದಾರರು ನಿರಾಕರಿಸಿದ ಹಿನ್ನೆಲೆಯಲ್ಲಿ, ಗಣೇಶ್ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಪೊಲೀಸ್ ಅಧಿನಿಯಮ 1965ರ ಕಲಂ 92ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!