ಕಬೀರ್ ಬಾಖವಿ ಇಂದು ಸಾರೆಪುಣಿ
ಪುತ್ತೂರು: ಕುಂಬ್ರ ಸಮೀಪದ ಸಾರೆಪುಣಿ ಮುಹಿಯುದ್ದೀನ್ ಜುಮಾ ಮಸೀದಿ, ದಾರುಲ್ ಉಲೂಮ್ ಮದರಸ ಮತ್ತು ಜಮಾಅತ್ ಕಮಿಟಿಯ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಶಂಸುಲ್ ಉಲಮಾ ಯಂಗ್ ಮೆನ್ಸ್ ಸಾರೆಪುಣಿ ಇದರ ವತಿಯಿಂದ 31ನೇ ವರ್ಷದ ಶಂಸುಲ್ ಉಲಮಾ ಅನುಸ್ಮರಣೆ ಹಾಗೂ ಎರಡು ದಿನಗಳ ಧಾರ್ಮಿಕ ಪ್ರಭಾಷಣ ಕಾರ್ಯಕ್ರಮದ ಸಮಾರೋಪ ನ.1ರಂದು ಮಗ್ರಿಬ್ ನಮಾಜಿನ ಬಳಿಕ ಸಾರೆಪುಣಿಯಲ್ಲಿ ನಡೆಯಲಿದೆ.

ಸಾರೆಪುಣಿ ಮಸೀದಿಯ ಗೌರವಾಧ್ಯಕ್ಷರಾದ ಸಯ್ಯದ್ ಅಹ್ಮದ್ ಪೂಕೋಯ ತಂಙಳ್ ಪುತ್ತೂರು ದುವಾಶೀರ್ವಚನ ನೀಡಲಿದ್ದು, ಅಂತರ್ರ್ರಾಷ್ಟ್ರೀಯ ಖ್ಯಾತಿಯ ಪ್ರಭಾಷಣಗಾರ ಹಾಫಿಲ್ ಅಹ್ಮದ್ ಕಬೀರ್ ಬಾಖವಿ ತಿರುವನಂತಪುರಂ ಅವರು ಮುಖ್ಯ ಪ್ರಭಾಷಣ ನಡೆಸಲಿದ್ದಾರೆ.
ಕಾರ್ಯಕ್ರಮದಲ್ಲಿ ಹಲವಾರು ಉಲಮಾ, ಉಮರಾ ನಾಯಕರು ಭಾಗವಹಿಸಲಿದ್ದಾರೆ ಎಂದು ಸ್ವಾಗತ ಸಮಿತಿ ಪದಾಧಿಕಾರಿಗಳು ತಿಳಿಸಿದ್ದಾರೆ.



