ರಾಜ್ಯ

ದೀಪಾವಳಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್‌ಆರ್‌ಟಿಸಿ 1,500 ವಿಶೇಷ ಬಸ್‌ಗಳ ವ್ಯವಸ್ಥೆ



ಬೆಂಗಳೂರು: ದೀಪಾವಳಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್‌ಆರ್‌ಟಿಸಿ 1,500 ವಿಶೇಷ ಬಸ್‌ಗಳ ಕಾರ್ಯಾಚರಣೆಗೆ ವ್ಯವಸ್ಥೆ ಮಾಡಿದೆ.

ಸಾಂದರ್ಭಿಕ ಚಿತ್ರ

ಅ.21ರಿಂದ 23ರವರೆಗೆ ಬೆಂಗಳೂರಿನಿಂದ ರಾಜ್ಯದ ವಿವಿಧ ಜಿಲ್ಲೆಗಳು ಮತ್ತು ಹೊರ ರಾಜ್ಯಗಳಿಗೆ ವಿಶೇಷ ಬಸ್‌ಗಳು ಹೊರಡಲಿವೆ. 26ರಿಂದ 30ರ ವರೆಗೆ ಬೆಂಗಳೂರಿಗೆ ವಾಪಸ್ ಬರಲಿವೆ.

ಮೆಜೆಸ್ಟಿಕ್‌ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿಗೆ ಬಸ್‌ಗಳು ಸಂಚಾರ ಮಾಡಲಿವೆ.

ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿಗೆ ತೆರಳಲಿವೆ. ತಮಿಳುನಾಡು ಮತ್ತು ಆಂಧ್ರ ಪ್ರದೇಶಕ್ಕೆ ಶಾಂತಿನಗರದ ಬಿಎಂಟಿಸಿ ಬಸ್ ನಿಲ್ದಾಣದಿಂದ ಬಸ್‌ಗಳು ಸಂಚರಿಸಲಿವೆ.

ಆಸನಗಳನ್ನು ಮುಂಗಡವಾಗಿ ಕಾಯ್ದಿರಿಸುವ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ
ಟಿಕೆಟ್‌ ಕಾಯ್ದಿರಿಸಿದಲ್ಲಿ ಶೇ 5ರಷ್ಟು ರಿಯಾಯಿತಿ ನೀಡಲಾಗುವುದು. ಹೋಗುವ ಮತ್ತು ಬರುವ ಪ್ರಯಾಣದ ಟಿಕೆಟನ್ನು ಒಟ್ಟಿಗೆ ಕಾಯ್ದಿರಿಸಿದಾಗ ಹಿಂದಿರುಗುವ ಪ್ರಯಾಣ ದರದಲ್ಲಿ ಶೇ 10ರಷ್ಟು ರಿಯಾಯಿತಿ ಕೊಡಲಾಗುವುದು. ಪ್ರಯಾಣಿಕರ ಒತ್ತಡಕ್ಕೆ ಅನುಗುಣವಾಗಿ ನಿಗಮದ ಕಾರ್ಯಾಚರಣೆ ವ್ಯಾಪ್ತಿಯಲ್ಲಿನ ಎಲ್ಲಾ ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಿಂದಲೂ ವಿಶೇಷ ಬಸ್‌ಗಳು ಕಾರ್ಯಾಚರಣೆ ಮಾಡಲಿವೆ ಎಂದು ಕೆಎಸ್‌ಆರ್‌ಟಿಸಿ ಪ್ರಕಟಣೆ ತಿಳಿಸಿದೆ

Leave a Reply

Your email address will not be published. Required fields are marked *

error: Content is protected !!