ಮಹಿಳೆಯನ್ನು ಹಿಂಬಾಲಿಸಿ ಅನುಚಿತ ವರ್ತನೆ: ಆರೋಪಿ ಬಂಧನ
ಪುತ್ತೂರು: ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೊಬ್ಬರನ್ನು ಸ್ಕೂಟರ್ನಲ್ಲಿ ಹಿಂಬಾಲಿಸಿಕೊಂಡು ಬಂದು ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ಯುವಕನೊಬ್ಬನನ್ನು ಪುತ್ತೂರು ಗ್ರಾಮಾಂತರ ಪೊಲೀಸರು ಬಂಧಿಸಿದ ಘಟನೆ ಕುರಿಯ ಎಂಬಲ್ಲಿ ನಡೆದಿದೆ.

ನ.6ರಂದು ಮಧ್ಯಾಹ್ನ ಕುರಿಯ ಎಂಬಲ್ಲಿ ಮಹಿಳೆಯೊಬ್ಬರು ನಡೆದುಕೊಂಡು ಹೋಗುತ್ತಿದ್ದ ವೇಳೆ ಸ್ಕೂಟರ್ನಲ್ಲಿ ಬಂದ ಯುವಕನೊಬ್ಬ ಅವರನ್ನು ಹಿಂಬಾಲಿಸಿಕೊಂಡು ಬಂದು ಸಮೀಪದಲ್ಲಿ ಸ್ಕೂಟರ್ ನಿಲ್ಲಿಸಿ ಅನುಚಿತವಾಗಿ ವರ್ತಿಸಿದ್ದಾನೆ ಎನ್ನಲಾಗಿದೆ. ಇದರಿಂದ ಭಯಗೊಂಡ ಮಹಿಳೆ ಬೊಬ್ಬೆ ಹೊಡೆದಿದ್ದು, ಈ ವೇಳೆ ಸ್ಥಳೀಯರು ಆರೋಪಿಯನ್ನು ಹಿಡಿದು ವಿಚಾರಿಸಿದಾಗ ಇಯಾಸ್ ಪುರುಷರ ಕಟ್ಟೆ ಎಂಬುದಾಗಿ ತಿಳಿದು ಬಂದಿದೆ.
ಆರೋಪಿಯು ಅ.30ರಂದು ಕೂಡ ಮಹಿಳೆಯನ್ನು ಹಿಂಬಾಲಿಸಿಕೊಂಡು ಬಂದಿದ್ದ ಎನ್ನಲಾಗಿದ್ದು, ಈ ಬಗ್ಗೆ ನೀಡಿದ ದೂರಿನಂತೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 139/2026ರಂತೆ ಬಿಎನ್ಎಸ್ಎಸ್ 2023ರ ಕಲಂ 75(2), 78(1), 79ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಸೂಕ್ತ ಜಾಮೀನು ಷರತ್ತುಗಳೊಂದಿಗೆ ಬಿಡುಗಡೆ ಮಾಡಿದೆ.




