ಉಪ್ಪಿನಂಗಡಿ ಬಳಿ ಬೈಕ್ ಗೆ ಕಾರು ಡಿಕ್ಕಿ- ಬೆಂಕಿಗಾಹುತಿಯಾದ ಬೈಕ್
ಪುತ್ತೂರು: ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಬೆಂಕಿಗೆ ಆಹುತಿಯಾಗಿ ಹಾನಿಯಾದ ಘಟನೆ ಉಪ್ಪಿನಂಗಡಿ ಬಳಿಯ ಕೂಟೇಲು ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ನ.10ರಂದು ನಡೆದಿದೆ.

ಡಿಕ್ಕಿಯ ಪರಿಣಾಮ ಬೈಕ್ ರಸ್ತೆಗೆ ಉರುಳಿ ಬಿದ್ದಿದ್ದು, ತಕ್ಷಣವೇ ಬೆಂಕಿ ಹೊತ್ತಿಕೊಂಡಿದೆ. ಬೆಂಕಿಯನ್ನು ನಂದಿಸಲು ತಕ್ಷಣದ ಯಾವುದೇ ವ್ಯವಸ್ಥೆ ಲಭ್ಯವಿಲ್ಲದ ಕಾರಣ, ಬೈಕ್ ಬಹುತೇಕ ಸುಟ್ಟು ಹೋಗಿತ್ತು. ಅದೃಷ್ಟವಶಾತ್, ಬೈಕ್ ಸವಾರ ಪವಾಡ ಸದೃಶವಾಗಿ ಪಾರಾಗಿದ್ದು, ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಪಾಯದಿಂದ ಪಾರಾಗಿದ್ದಾನೆ.




