ಕರಾವಳಿ

ನಂತೂರು ಜಂಕ್ಷನ್‌ನಲ್ಲಿ ಲಾರಿ–ಕಾರು ನಡುವೆ ಭೀಕರ ಅಪಘಾತ: ಇಬ್ಬರಿಗೆ ಗಂಭೀರ ಗಾಯ

ಮಂಗಳೂರು: ನಗರದ ನಂತೂರು ಜಂಕ್ಷನ್‌ನಲ್ಲಿ ಲಾರಿ ಮತ್ತು ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನ.12ರಂದು ರಾತ್ರಿ ನಡೆದಿದೆ.

ರಾತ್ರಿ ಸುಮಾರು 9.50ರ ವೇಳೆಗೆ ಪಂಪ್‌ವೆಲ್ ಕಡೆಯಿಂದ ಬಂದ ಲಾರಿಯನ್ನು ಅದರ ಚಾಲಕ ಏಕಾಏಕಿ ಬ್ರೇಕ್ ಹಾಕಿದ್ದಾನೆ. ಈ ವೇಳೆ ಹಿಂಬದಿಯಿಂದ ಬರುತ್ತಿದ್ದ ಕಾರು ಲಾರಿಯ ಹಿಂಭಾಗಕ್ಕೆ ಢಿಕ್ಕಿಯಾಗಿದೆ ಎನ್ನಲಾಗಿದೆ. ಅಪಘಾತದ ಪರಿಣಾಮ ಕಾರು ಚಾಲಕ ನಿಜಾಮ್ ಹಾಗೂ ಸಹ ಪ್ರಯಾಣಿಕ ಮುಫಿಜ್ ಗಂಭೀರವಾಗಿ ಗಾಯಗೊಂಡಿದ್ದು, ಇಬ್ಬರನ್ನೂ ಚಿಕಿತ್ಸೆಗಾಗಿ ಎ.ಜೆ. ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದಲ್ಲಿ ಕಾರು ತೀವ್ರವಾಗಿ ಜಖಂಗೊಂಡಿದ್ದು, ಲಾರಿಯ ಹಿಂಭಾಗದ ಬಲಭಾಗಕ್ಕೂ ಅಲ್ಪ ಪ್ರಮಾಣದ ಹಾನಿಯಾಗಿದೆ.

Leave a Reply

Your email address will not be published. Required fields are marked *

error: Content is protected !!