ಕರಾವಳಿಕ್ರೈಂ

ಮಡಂತ್ಯಾರಿನ ಜ್ಯುವೆಲ್ಲರಿ ಅಂಗಡಿಯಲ್ಲಿ ₹4.40 ಲಕ್ಷ ಮೌಲ್ಯದ ಚಿನ್ನಾಭರಣ ಕಳವು



ಬೆಳ್ತಂಗಡಿ: ಮಡಂತ್ಯಾರಿನ ಜ್ಯುವೆಲ್ಲರಿ ಅಂಗಡಿಯೊಂದರಲ್ಲಿ ಗ್ರಾಹಕರ ಸೋಗಿನಲ್ಲಿ ಬಂದ ಇಬ್ಬರು ಅಪರಿಚಿತ ವ್ಯಕ್ತಿಗಳು ಸುಮಾರು ₹4.40 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ಕಳವುಗೈದ ಘಟನೆ ನ.16ರಂದು ನಡೆದಿದೆ.

ಮಡಂತ್ಯಾರು ನಿವಾಸಿ ರಾಜೇಶ್ (43) ಎಂಬವರು ತಮ್ಮ ಮಾಲಕತ್ವದ ಜ್ಯುವೆಲ್ಲರಿ ಅಂಗಡಿಯಲ್ಲಿದ್ದಾಗ, ಆಭರಣ ಖರೀದಿಸುವ ನೆಪದಲ್ಲಿ ಇಬ್ಬರು ಅಪರಿಚಿತ ವ್ಯಕ್ತಿಗಳು ಅಂಗಡಿಗೆ ಬಂದಿದ್ದರು. ಈ ವೇಳೆ ಅಂಗಡಿಯಲ್ಲಿದ್ದ ಸುಮಾರು 35 ಗ್ರಾಂ ತೂಕದ, ಅಂದಾಜು ₹4,40,000 ಮೌಲ್ಯದ ಚಿನ್ನಾಭರಣಗಳನ್ನು ರಾಜೇಶ್ ಅವರ ಗಮನಕ್ಕೆ ಬಾರದಂತೆ ಕಳವು ಮಾಡಿಕೊಂಡು ಪರಾರಿಯಾಗಿದ್ದಾರೆ ಎನ್ನಲಾಗಿದೆ.

ಮರುದಿನ ಬೆಳಿಗ್ಗೆ ಅಂಗಡಿಯಲ್ಲಿ ಚಿನ್ನಾಭರಣಗಳನ್ನು ಜೋಡಿಸುವ ಸಂದರ್ಭದಲ್ಲಿ ಆಭರಣಗಳು ಕಳವಾಗಿರುವುದು ರಾಜೇಶ್ ಅವರ ಗಮನಕ್ಕೆ ಬಂದಿದೆ. ಈ ಕುರಿತು ಅವರು ನೀಡಿದ ದೂರಿನಂತೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಅ.ಕ್ರ. 92/2026ರಂತೆ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) 2023ರ ಕಲಂ 303(2) ಜೊತೆಗೆ 3(5)ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!