ವಿಟ್ಲ: ದಾಖಲೆಗಳಿಲ್ಲದೆ ಲಾರಿಯಲ್ಲಿ ಕೆಂಪು ಕಲ್ಲು ಸಾಗಾಟ; ಇಬ್ಬರ ವಿರುದ್ಧ ಪ್ರಕರಣ
ವಿಟ್ಲ: ಯಾವುದೇ ಪರವಾನಿಗೆ ಅಥವಾ ದಾಖಲೆಗಳಿಲ್ಲದೆ ಲಾರಿಯಲ್ಲಿ ಕೆಂಪು ಕಲ್ಲುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಲಾರಿಯನ್ನು ವಿಟ್ಲ ಪೊಲೀಸರು ವಶಪಡಿಸಿಕೊಂಡು, ಚಾಲಕ ಹಾಗೂ ಮಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ನ.19ರಂದು ಮಧ್ಯಾಹ್ನ ಕೇರಳ ಕಡೆಯಿಂದ ಮಂಚಿ ಮಾರ್ಗವಾಗಿ ವೀರಕಂಭ ಕಡೆಗೆ ಕೆಂಪು ಕಲ್ಲುಗಳನ್ನು ಸಾಗಿಸುತ್ತಿದ್ದ ಬಗ್ಗೆ ಪೊಲೀಸರಿಗೆ ಮಾಹಿತಿ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ವಿಟ್ಲ ಪೊಲೀಸರು ಬಂಟ್ವಾಳದ ಬೊಳಂತೂರು ಕೊಕ್ಕಪುನಿ ಎಂಬಲ್ಲಿ ಲಾರಿಯನ್ನು ತಡೆದು ತಪಾಸಣೆ ನಡೆಸಿದಾಗ, ಯಾವುದೇ ಪರವಾನಿಗೆ ಅಥವಾ ದಾಖಲೆಗಳಿಲ್ಲದೆ ಕೆಂಪು ಕಲ್ಲು ಸಾಗಿಸುತ್ತಿರುವುದು ಪತ್ತೆಯಾಗಿದೆ.
ಲಾರಿಯನ್ನು ವಶಪಡಿಸಿಕೊಂಡ ಪೊಲೀಸರು, ಚಾಲಕ ಮೊಹಮ್ಮದ್ ರಪೀಕ್ (62) ಹಾಗೂ ಲಾರಿ ಮಾಲಕ ಮೊಹಮ್ಮದ್ ಅಶ್ರಫ್ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.




