ಕರಾವಳಿ

ಅಶೋಕ ಜನಮನ ಕಾರ್ಯಕ್ರಮದ ಯಶಸ್ಸಿಗಾಗಿ ದೇವರಲ್ಲಿ ವಿಶೇಷ ಪ್ರಾರ್ಥನೆ

ಪುತ್ತೂರು: ದೀಪಾವಳಿ ಹಬ್ಬದ ಪ್ರಯುಕ್ತ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ನೇತೃತ್ವದಲ್ಲಿ ನಾಳೆ(ನ.22)ಕೊಂಬೆಟ್ಟು ಕ್ರೀಡಾಂಗಣದಲ್ಲಿ ನಡೆಯಲಿರುವ ಬೃಹತ್ ವಸ್ತ್ರ ವಿತರಣೆಯ ‘ಅಶೋಕ ಜನಮನ’ ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಲಿ ಹಾಗೂ ಸರ್ವರಿಗೂ ಒಳಿತಾಗಲಿ ಎಂಬ ಸದುದ್ದೇಶದಿಂದ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ದೇವರ ಸನ್ನಿಧಿಯಲ್ಲಿ ಶಾಸಕ ಅಶೋಕ್ ರೈ ಹಾಗೂ ಅವರ ಪತ್ನಿ ಸುಮಾ ಅಶೋಕ್ ರೈ ವಿಶೇಷ ಪ್ರಾರ್ಥನೆ ಸಲ್ಲಿಸಿದರು.


ಸಮಾಜದ ಪ್ರತಿಯೊಬ್ಬರ ಮುಖದಲ್ಲೂ ಸಂತಸದ ನಗು ಮೂಡಿಸುವ ಈ ಜನಪರ ಕಾರ್ಯಕ್ರಮವು ಯಾವುದೇ ವಿಘ್ನಗಳಿಲ್ಲದೆ ಯಶಸ್ವಿಯಾಗಿ ನಡೆಯಲಿ ಹಾಗೂ ಸರ್ವರಿಗೂ ಸುಖ, ಶಾಂತಿ ಮತ್ತು ಸಮೃದ್ಧಿ ದೊರೆಯಲಿ ಎಂದು ದೇವರಲ್ಲಿ ಪ್ರಾರ್ಥಿಸಲಾಯಿತು.

Leave a Reply

Your email address will not be published. Required fields are marked *

error: Content is protected !!