ಅಂತಾರಾಷ್ಟ್ರೀಯಕ್ರೀಡೆರಾಷ್ಟ್ರೀಯ

ನ್ಯೂಝಿಲೆಂಡ್ ವಿರುದ್ಧ ದ ಮೊದಲ ಟೆಸ್ಟ್; ಸಿರಾಜ್, ಜಡೇಜಾಗೆ ಸಿಗದ ಅವಕಾಶ-ಅಶ್ವಿನ್‌ ಆಕ್ರೋಶ



ಮುಂಬೈ: ನ್ಯೂಝಿಲೆಂಡ್ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತದ ಅನುಭವಿ ಆಟಗಾರರಾದ ಮೊಹಮ್ಮದ್ ಸಿರಾಜ್ ಮತ್ತು ರವೀಂದ್ರ ಜಡೇಜಾ ಅವರನ್ನು ಆಡುವ 11ರ ಬಳಗದಿಂದ ಕೈಬಿಟ್ಟಿರುವ ಟೀಮ್ ಇಂಡಿಯಾ ಮ್ಯಾನೇಜ್‌ಮೆಂಟ್ ನಿರ್ಧಾರಕ್ಕೆ ಮಾಜಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.



ನಾಯಕ ಶುಭ್ಮನ್ ಗಿಲ್ ಹಾಗೂ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರ ಈ ಆಯ್ಕೆ ತಂತ್ರವನ್ನು ಇದು ಸಂಪೂರ್ಣ ಹುಚ್ಚುತನ ಎಂದು ಅಶ್ವಿನ್‌ ಕರೆದಿದ್ದಾರೆ.
ಈ ಬಗ್ಗೆ ಮಾತನಾಡಿದ ಅಶ್ವಿನ್, ಮೊಹಮ್ಮದ್ ಸಿರಾಜ್ ಮತ್ತು ರವೀಂದ್ರ ಜಡೇಜಾ ಭಾರತದ ಕ್ರಿಕೆಟ್‌ಗೆ ನೀಡಿದ ಕೊಡುಗೆ ಅಪಾರವಾಗಿದೆ. ಇಂತಹ ಹಿರಿಯ ಮತ್ತು ಮ್ಯಾಚ್-ವಿನ್ನರ್ ಆಟಗಾರರನ್ನು ಮುಂಚಿತವಾಗಿಯೇ ಬೆಂಚ್ ಕಾಯಿಸುವ ನಿರ್ಧಾರ ಸರಿಯಲ್ಲ ಎಂದಿದ್ದಾರೆ.

ಇಂಗ್ಲೆಂಡ್ ವಿರುದ್ಧದ ಹಿಂದಿನ ಟೆಸ್ಟ್ ಸರಣಿಯಲ್ಲಿ ರವೀಂದ್ರ ಜಡೇಜಾ 516 ರನ್ ಗಳಿಸಿ ಭರ್ಜರಿ ಫಾರ್ಮ್‌ನಲ್ಲಿದ್ದರು. ಮತ್ತೊಂದೆಡೆ, ಪ್ರಸ್ತುತ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಆವೃತ್ತಿಯಲ್ಲಿ ಸಿರಾಜ್ ಭಾರತದ ಪರ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಆಗಿದ್ದಾರೆ. ವಿಶೇಷವಾಗಿ ಸೌತ್ ಆಫ್ರಿಕಾ, ಇಂಗ್ಲೆಂಡ್, ನ್ಯೂಝಿಲೆಂಡ್ ಮತ್ತು ಆಸ್ಟ್ರೇಲಿಯಾ ರಾಷ್ಟ್ರಗಳಲ್ಲಿ ಸಿರಾಜ್ ಪ್ರಮುಖ ಅಸ್ತ್ರವಾಗಿದ್ದಾರೆ. ಇಷ್ಟೆಲ್ಲಾ ದಾಖಲೆಗಳಿದ್ದರೂ ಅವರನ್ನು ಕೈಬಿಟ್ಟಿರುವುದು ಅನ್ಯಾಯ ಎಂದು ಅಶ್ವಿನ್ ಕಿಡಿಕಾರಿದ್ದಾರೆ.

Leave a Reply

Your email address will not be published. Required fields are marked *

error: Content is protected !!