ಅಂತಾರಾಷ್ಟ್ರೀಯಕ್ರೀಡೆ

ಹೊಸ ದಾಖಲೆ ಬರೆದ ವೈಭವ್ ಸೂರ್ಯವಂಶಿ

ಉದಯೋನ್ಮುಖ ಬ್ಯಾಟರ್ ವೈಭವ್ ಸೂರ್ಯವಂಶಿ ಯುಎಇ ವಿರುದ್ಧ ಅಬ್ಬರದ ದ್ವಿಶತಕ ಸಿಡಿಸುವ ಮೂಲಕ ವಿಶ್ವ ದಾಖಲೆ ಬರೆದಿದ್ದಾರೆ.



‘ಏಷ್ಯಾ ಕಪ್ ರೈಸಿಂಗ್ ಸ್ಟಾರ್ಸ್ 2026’ ಟೂರ್ನಿಯ ಗ್ರೂಪ್ ಹಂತದ ಪಂದ್ಯದಲ್ಲಿ ಯುಎಇ ವಿರುದ್ಧ ಭಾರತ ‘ಎ’ ತಂಡದ ವೈಭವ್ ಸೂರ್ಯವಂಶಿ ಕೇವಲ 28 ಎಸೆತಗಳಲ್ಲಿ ಶತಕ ಸಿಡಿಸಿದ್ದು ಏಕದಿನ ಕ್ರಿಕೆಟ್‌ನಲ್ಲಿ ಅತ್ಯಂತ ವೇಗದ ಶತಕದ ದಾಖಲೆಯಾಗಿದೆ. 52 ಎಸೆತಗಳಲ್ಲಿ  ವೇಗದ ದ್ವಿಶತಕ ಸಿಡಿಸಿ ಹೊಸ ದಾಖಲೆ ಬರೆದಿದ್ದಾರೆ.


15 ವರ್ಷದ ವೈಭವ್, ಏಳು ಓವರ್‌ಗಳಿಗಿಂತ ಕಡಿಮೆ ಅವಧಿಯಲ್ಲಿ ಶತಕ ಪೂರೈಸುವ ಮೂಲಕ ‘ಲಿಸ್ಟ್ ಎ’ ಕ್ರಿಕೆಟ್ ಇತಿಹಾಸದಲ್ಲೇ ಅತಿ ವೇಗದ ಶತಕ ದಾಖಲಿಸಿದ್ದಾರೆ. ಅಲ್ಲದೆ 52 ಎಸೆತಗಳಲ್ಲಿ ದ್ವಿಶತಕ ಗಳಿಸುವ ಮೂಲಕ ಹೊಸ ದಾಖಲೆ ಬರೆದಿದ್ದಾರೆ.


ದೋಹಾದಲ್ಲಿ ನಡೆದ ಮಾಡು ಇಲ್ಲವೇ ಮಂಡಿ ಪಂದ್ಯದಲ್ಲಿ ಗೆಲುವಿಗೆ ಯುಎಇ ನೀಡಿದ್ದ 250 ರನ್‌ಗಳ ಗುರಿ ಬೆನ್ನಟ್ಟದಿ ಭಾರತ ತಂಡವು ಕೇವಲ 14.2 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು ಜಯದ ನಗೆ ಬೀರಿತು. ವೈಭವ್ ಅವರ ಈ ಅಸಾಧಾರಣ ಇನ್ನಿಂಗ್ಸ್‌ನಲ್ಲಿ 28 ಸಿಕ್ಸರ್‌ಗಳು ಮತ್ತು 7 ಬೌಂಡರಿಗಳಿದ್ದವು.

Leave a Reply

Your email address will not be published. Required fields are marked *

error: Content is protected !!