ವಿಟ್ಲ: ಸಾರ್ವಜನಿಕ ಸ್ಥಳದಲ್ಲಿ ಗಲಾಟೆ, ಐವರ ವಿರುದ್ಧ ಪ್ರಕರಣ ದಾಖಲು
ವಿಟ್ಲ: ಬಂಟ್ವಾಳ ತಾಲೂಕಿನ ಕೊಳ್ನಾಡು ಗ್ರಾಮದ ಬೋಳ್ಪಾದೆ ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ಗುಂಪು ಸೇರಿಕೊಂಡು ಗಲಾಟೆ ನಡೆಸಿ, ಅವಾಚ್ಯ ಶಬ್ದಗಳಿಂದ ಬೈದಾಡಿಕೊಂಡು ಸಾರ್ವಜನಿಕ ಶಾಂತಿಗೆ ಭಂಗ ಉಂಟುಮಾಡಿದ ಘಟನೆ ನ.23ರ ಸಂಜೆ ನಡೆದಿದೆ.

ಸುಮಾರು 5ರಿಂದ 10 ಮಂದಿ ಗುಂಪು ಸೇರಿಕೊಂಡು ಗಲಾಟೆ ನಡೆಸುತ್ತಿರುವ ಬಗ್ಗೆ ವಿಟ್ಲ ಪೊಲೀಸರಿಗೆ ಮಾಹಿತಿ ಲಭಿಸಿತ್ತು. ಮಾಹಿತಿ ಮೇರೆಗೆ ಸ್ಥಳಕ್ಕೆ ತೆರಳಿದ ಪೊಲೀಸ್ ಸಿಬ್ಬಂದಿ, ಕೆಲವರು ಪರಸ್ಪರ ಅವಾಚ್ಯ ಶಬ್ದಗಳಿಂದ ಬೈದಾಡಿಕೊಂಡು ಗಲಾಟೆ ನಡೆಸುತ್ತಿರುವುದನ್ನು ಗಮನಿಸಿದ್ದಾರೆ. ಈ ವೇಳೆ ಪೊಲೀಸರನ್ನು ಕಂಡು ಗುಂಪಿನಲ್ಲಿದ್ದವರು ಪರಾರಿಯಾಗಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿ ಬಶೀರ್ ಪುಣಚ, ಆಶಿಕ್ ಬೋಳ್ಪಾದೆ, ಸಫ್ವಾನ್ ಕುಡ್ತಮುಗೇರು, ಅಸೀಫ್ ಕೆಲಿಂಜ ಹಾಗೂ ದರ್ವೇಶ್ ಬೋಳ್ಪಾದೆ ಸೇರಿದಂತೆ ಇತರರ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ. 242/2026, ಕಲಂ 194(2) ಬಿಎನ್ಎಸ್ 2023ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.



