ಎಐಸಿಸಿ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ: ಶಶಿ ತರೂರ್ ಗೆ ಭರ್ಜರಿ ಸೋಲು
ನವದೆಹಲಿ: ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನದ ಚುನಾವಣೆಯ ಮತ ಎಣಿಕೆ ಇಂದು ನಡೆದಿದ್ದು, ಮಲ್ಲಿಕಾರ್ಜುನ ಖರ್ಗೆ ಜಯಭೇರಿ ಬಾರಿಸಿದ್ದಾರೆ. ಪ್ರತಿಸ್ಫರ್ಧಿ ಶಶಿ ತರೂರ್ ಸೋಲನುಭವಿಸಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ ಅವರು 7897 ಮತ ಪಡೆದುಕೊಂಡರೆ, ಶಶಿ ತರೂರ್ ಕೇವಲ 1072 ಮತ ಪಡೆದಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸೋಮವಾರ ನಡೆದ ಚುನಾವಣೆಯಲ್ಲಿ ಶೇ 96ರಷ್ಟು ಮತದಾನವಾಗಿತ್ತು. 9,915 ಪ್ರತಿನಿಧಿಗಳ ಪೈಕಿ 9,500 ಪ್ರತಿನಿಧಿಗಳು ತಮ್ಮ ಹಕ್ಕು ಚಲಾಯಿಸಿದ್ದರು.