ಕ್ರೈಂರಾಷ್ಟ್ರೀಯ

ಕಿರುತೆರೆ ನಟಿ ವೈಶಾಲಿ ಠಕ್ಕರ್ ಆತ್ಮಹತ್ಯೆ ಪ್ರಕರಣ: ಪ್ರಮುಖ ಆರೋಪಿ ಬಂಧನ



ಭೋಪಾಲ್: ಖ್ಯಾತ ಕಿರುತೆರೆ ನಟಿ ವೈಶಾಲಿ ಠಕ್ಕರ್ (29) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪ್ರಮುಖ ಆರೋಪಿ ರಾಹುಲ್‌ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ.

ವೈಶಾಲಿ ಮತ್ತು ರಾಹುಲ್

ವೈಶಾಲಿ ಠಕ್ಕರ್ ಅವರು ಇತ್ತೀಚೆಗೆ ಮಧ್ಯಪ್ರದೇಶದ ಇಂದೋರ್‌ನಲ್ಲಿರುವ ತಮ್ಮ ಮನೆಯಲ್ಲಿ ನೇಣು ಹಾಕಿಕೊಂಡು ಮೃತಪಟ್ಟಿದ್ದರು. ಘಟನೆ ನಡೆದ ಸ್ಥಳದಲ್ಲಿ ಡೆತ್‌ನೋಟ್ ಪತ್ತೆಯಾಗಿತ್ತು.

ಮಾಜಿ ಗೆಳೆಯನಿಂದ ಕಿರುಕುಳಕ್ಕೊಳಗಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ವೈಶಾಲಿ, ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿದ್ದರು. ಡೆತ್‌ನೋಟ್‌ ಆಧರಿಸಿ ತನಿಖೆ ನಡೆಸಿದ ತೇಜಾಜಿ ನಗರ ಪೊಲೀಸರು ರಾಹುಲ್‌ನನ್ನು ವಶಕ್ಕೆ ಪಡೆದಿದ್ದಾರೆ.

Leave a Reply

Your email address will not be published. Required fields are marked *

error: Content is protected !!