ಸೀಟ್ ಬೆಲ್ಟ್ ಕಡ್ಡಾಯ ಆದೇಶ ಪುನರ್ ಪರಿಶೀಲನೆ- ಸಾರ್ವಜನಿಕರಿಂದ ತೀವ್ರ ಆಕ್ಷೇಪ
ಬೆಂಗಳೂರು: ಕಾರುಗಳಲ್ಲಿ ಪ್ರಯಾಣಿಸುವ ಹಿಂಬದಿ ಸವಾರರು ಕಡ್ಡಾಯವಾಗಿ ಸೀಟ್ ಬೆಲ್ಟ್ ಧರಿಸಬೇಕೆಂದು ಪೊಲೀಸ್ ಇಲಾಖೆ ಮಾಡಿರುವ ಆದೇಶವನ್ನು ಪುನರ್ ಪರಿಶೀಲನೆ ನಡೆಸುವುದಕ್ಕೆ ರಾಜ್ಯ ಸರ್ಕಾರ ನಿರ್ಧರಿಸಿದೆ.
ಹಿಂಬದಿ ಪ್ರಯಾಣಿಕರು ಕಡ್ಡಾಯವಾಗಿ ಸೀಟ್ ಬೆಲ್ಟ್ ಧರಿಸಬೇಕು. ಇಲ್ಲವಾದರೆ 1000 ರೂ. ದಂಡ ವಿಧಿಸಲಾಗುವುದು ಎಂದು ಪೊಲೀಸ್ ಇಲಾಖೆ ಆದೇಶ ಮಾಡಿತ್ತು.
ಈ ಬಗ್ಗೆ ಸಾರ್ವಜನಿಕರಿಂದ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ಈ ಬಗ್ಗೆ ಸಂಪುಟ ಸಭೆಯಲ್ಲೂ ಚರ್ಚೆಯಾಗಿದ್ದು, ಆದೇಶ ಪುನರ್ ಪರಿಶೀಲನೆ ನಡೆಸಲು ಬಗ್ಗೆ ತೀರ್ಮಾನಿಸಲಾಗಿದೆ.