ರಾತ್ರಿ ಊಟ ಮಾಡಿ ಮಲಗಿದ್ದ ವ್ಯಕ್ತಿ ಬೆಳಗ್ಗೆ ನೋಡಿದರೆ ನೇಣಿಗೆ ಶರಣು
ರಾತ್ರಿ ಮನೆಯಲ್ಲಿ ಊಟ ಮಾಡಿ ಮಲಗಿದ್ದ ವ್ಯಕ್ತಿ ಮುಂಜಾನೆಯ ಒಳಗೆ ಮನೆಯ ಪಕ್ಕದಲ್ಲಿದ್ದ ಗೇರು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಟ್ಕಳದಲ್ಲಿ ಅ. 19ರಂದು ವರದಿಯಾಗಿದೆ.
ಕೆಲವು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿ ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯ ಪಕ್ಕದಲ್ಲಿದ್ದ ಗೇರು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಮೃತ ವ್ಯಕ್ತಿ ಪದ್ಮಯ್ಯ ತಿಮ್ಮಪ್ಪ ನಾಯ್ಕ (55) ಕೂಲಿ ಕೆಲಸ ಮಾಡಿ ಜೀವನ ನಿರ್ವಹಿಸುತ್ತಿದ್ದರು.