ಕೇದಾರನಾಥ, ಬದರಿನಾಥ ಕ್ಷೇತ್ರಕ್ಕೆ ಇಂದು ಪ್ರಧಾನಿ ಮೋದಿ ಭೇಟಿ
ಡೆಹ್ರಾಡೂನ್: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು (ಅ.21) ಉತ್ತರಾಖಂಡದ ಕೇದಾರನಾಥ ಮತ್ತು ಬದರಿನಾಥ ಕ್ಷೇತ್ರಕ್ಕೆ ಭೇಟಿ ನೀಡಲಿದ್ದಾರೆ.

ಗೌರಿಕುಂಡ್– ಕೇದಾರನಾಥ ನಡುವೆ 9.7 ಕಿ.ಮೀ ಉದ್ದದ ಹೊಸ ರೋಪ್ ವೇ ಯೋಜನೆ, ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ₹3400 ಕೋಟಿಗೂ ಹೆಚ್ಚು ಮೌಲ್ಯದ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಮೋದಿ ಅವರು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ವರದಿಯಾಗಿದೆ.
ಮೋದಿ ಭೇಟಿ ಹಿನ್ನೆಲೆಯಲ್ಲಿ ಪೊಲೀಸ್ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಕೇದಾರನಾಥ ಮತ್ತು ಬದರಿನಾಥ ದೇವಾಲಯಗಳನ್ನು ಹೂವಿನಿಂದ ಅಲಂಕರಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ರಸ್ತೆ ವಿಸ್ತರಣೆ ಮತ್ತು ರೋಪ್‌ವೇ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಜನರನ್ನು ಉದ್ದೇಶಿಸಿ ಮೋದಿ
ಮಾತನಾಡಲಿದ್ದಾರೆ.