ಬಂಟ್ವಾಳ: ಕೆ ಎಸ್ ಆರ್ ಟಿ ಸಿ ಬಸ್ – ಕಾರುಗಳ ನಡುವೆ ಸರಣಿ ಅಪಘಾತ ಓರ್ವ ಮೃತ್ಯು, ಹಲವರು ಗಂಭೀರ

ಬಂಟ್ವಾಳ: ಕೆಎಸ್ ಆರ್ ಟಿಸಿ ಬಸ್ ಹಾಗೂ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ಓರ್ವರು ಮೃತಪಟ್ಟು ಹಲವರು ಗಂಭೀರ ಗಾಯಗೊಂಡಿರುವ ಘಟನೆ ಬಂಟ್ವಾಳದ ಮಣಿಹಳ್ಳ ಚಂತಿಮಾರ್ ಬಳಿ ಇಂದು ನಡೆದಿದೆ.

ಮಂಗಳೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ಮಣಿಹಳ್ಳ ಚಂತಿಮಾರ್ ಬಳಿ ಎದುರಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಸಭಕ್ಕೆ ಕಾರು ನಜ್ಜುಗುಜ್ಜಾಗಿದ್ದು, ಗಾಯಗೊಂಡವರನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ಸಾಗಿಸಿದ್ದಾರೆ.

ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಕೆಲಕಾಲ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು.