ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ವರ್ಗಾವಣೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಅವರನ್ನು ಮೈಸೂರು ಜಿಲ್ಲಾಧಿಕಾರಿಯಾಗಿ ಸರ್ಕಾರ ಶುಕ್ರವಾರ ವರ್ಗಾವಣೆ ಮಾಡಿದೆ.
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಕುಮಾರ್ ಅವರಿಗೆ ಜಿಲ್ಲಾಧಿಕಾರಿಯಾಗಿ ಹೆಚ್ಚುವರಿ ಹೊಣೆ ವಹಿಸಲಾಗಿದೆ.
ರಾಜೇಂದ್ರ ಕೆ.ವಿ ಅವರು 2020 ಜುಲೈ 30ರಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದಾರೆ.