ರಾಜ್ಯ

ತೀರಾ ಕೆಳಮಟ್ಟದಲ್ಲಿ ಹಾರಾಡಿದ ಹೆಲಿಕಾಪ್ಟರ್: ಗಾಬರಿಯಾದ ಜನ

ಕಾರವಾರ: ಇಲ್ಲಿನ ನಗರದ ಮಾಲಾದೇವಿ ಮೈದಾನ, ಜಿಲ್ಲಾಧಿಕಾರಿ ಕಚೇರಿ ಎದುರಿಗಿನ ಲಿಫ್ಟ್ ಓವರ್ ಮೇಲೆ ಹಾಗೂ ಟ್ಯಾಗೋರ್ ಕಡಲತೀರದಲ್ಲಿ ಭಾರತೀಯ ಕೋಸ್ಟ್ ಗಾರ್ಡ್‌ನ ಅಡ್ವಾನ್ಸ್ ಲೈಟ್ ಹೆಲಿಕಾಪ್ಟರ್ ಇಳಿಯಲು ಪ್ರಯತ್ನಿಸಿ ಪುನಃ ತೆರಳಿದೆ.

ಹೆಲಿಕಾಪ್ಟರ್ ತೀರಾ ಕೆಳಮಟ್ಟಕ್ಕೆ ಬಂದಿದ್ದನ್ನು ಕಂಡು ಸ್ಥಳೀಯರು ಒಮ್ಮೆ ಆತಂಕಕ್ಕೊಳಗಾಗಿದ್ದರು. ಏನು ನಡೆಯುತ್ತಿದೆ ಎನ್ನುವುದು ತಿಳಿಯದೇ ಗಾಬರಿಯಾದರು. ರಸ್ತೆ, ಕಡಲತೀರದಲ್ಲಿ ನಿಂತವರೆಲ್ಲ ಮೊಬೈಲ್‌ನಲ್ಲಿ ಫೋಟೋ, ವಿಡಿಯೋ ಮಾಡಿಕೊಂಡರು.

ಈ ಬಗ್ಗೆ ಕೋಸ್ಟ್ ಗಾರ್ಡ್ ಅಧಿಕಾರಿಗಳನ್ನು ಸಂಪರ್ಕಿಸಿದಾಗ, ಇದೊಂದು ಟ್ರೈಯಲ್ ಅಷ್ಟೇ. ತುರ್ತು ಸಂದರ್ಭದಲ್ಲಿ ಹೆಲಿಕಾಪ್ಟರ್ ಅನ್ನು ಎಲ್ಲೆಲ್ಲಿ ಸುರಕ್ಷಿತವಾಗಿ ಇಳಿಸಬಹುದು ಎಂಬ ಬಗ್ಗೆ ಪರೀಕ್ಷಾರ್ಥ ಪ್ರಯೋಗ ನಡೆಸುತ್ತಿದ್ದೇವೆ. ಅಂಕೋಲಾದ ಹಟ್ಟಿಕೇರಿ, ಕಾರವಾರದ ನಗರ ಭಾಗದಲ್ಲಿ ಪರೀಕ್ಷೆ ನಡೆಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!