ಮುಂದಿನ ಒಂದು ವರ್ಷದಲ್ಲಿ 10 ಲಕ್ಷ ಉದ್ಯೋಗ: ಸಚಿವೆ ಶೋಭಾ ಕರಂದ್ಲಾಜೆ
ಹುಬ್ಬಳ್ಳಿ: ‘ಪ್ರಧಾನಿ ನರೇಂದ್ರ ಮೋದಿ ಅವರು ದೇಶದಾದ್ಯಂತ 50 ಕೇಂದ್ರಗಳಲ್ಲಿ 75 ಸಾವಿರ ಉದ್ಯೋಗಿಗಳಿಗೆ ನೇಮಕಾತಿ ಪತ್ರ ನೀಡಿದ್ದಾರೆ. ಮುಂದಿನ ಒಂದು ವರ್ಷದಲ್ಲಿ ಕೇಂದ್ರ ಸರ್ಕಾರದ ರೈಲ್ವೆ, ಅಂಚೆ ಮತ್ತು ರಕ್ಷಣಾ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿ 10 ಲಕ್ಷ ಉದ್ಯೋಗ ಕಲ್ಪಿಸಲಾಗುವುದು’ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಹಾಯಕ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಅವರು ನೈರುತ್ಯ ರೈಲ್ವೆ ವಲಯವು ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ನೈರುತ್ಯ ರೈಲ್ವೆ, ಇಎಸ್ ಐ ಇಲಾಖೆಯ ಉದ್ಯೋಗಿಗಳಿಗೆ ನೇಮಕಾತಿ ಪತ್ರ ವಿತರಿಸಿ ಮಾತನಾಡಿದರು.
”ಪ್ರಧಾನಿ ಮೋದಿ ಅವರು ಈಹಿಂದೆ 10 ಲಕ್ಷ ಉದ್ಯೋಗ ನೀಡುವುದಾಗಿ ಹೇಳಿದ್ದರು. ಅದರಂತೆ ಈಗ ನಡೆದುಕೊಂಡಿದ್ದಾರೆ” ಎಂದು ಅವರು ತಿಳಿಸಿದರು.