ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ಆರೋಪ: ನಟ ಚೇತನ್ ಅಹಿಂಸಾ ವಿರುದ್ಧ FIR
ಬೆಂಗಳೂರು: ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿ ನಟ ಚೇತನ್ ಅಹಿಂಸಾ ( Chetan Ahimsa) ವಿರುದ್ಧ ಎಫ್ ಐಆರ್ ದಾಖಲಾಗಿದೆ.
ಶಿವಕುಮಾರ್ ಎಂಬವರ ದೂರಿನ ಅನ್ವಯ ನಗರದ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹಿಂದೂದೇವರ ಹಾಗೂ ಸಂಸ್ಕೃತಿಯ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆಗಳನ್ನು ನೀಡಿದ್ದಾರೆ. ಅವರ ವಿರುದ್ಧ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಬೇಕೆಂದು ಅವರು ದೂರಿನಲ್ಲಿ ತಿಳಿಸಿದ್ದರು.
ಇತ್ತೀಚಿಗೆ ಮಡಿಕೇರಿಯಲ್ಲೂ ವ್ಯಕ್ತಿಯೊಬ್ಬರು ಇದೇ ವಿಚಾರವಾಗಿ ಚೇತನ್ ವಿರುದ್ಧ ದೂರು ಸಲ್ಲಿಕೆ ಮಾಡಿ, ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯ ಮಾಡಿದ್ದರು.
ನಟ ಚೇತನ್ ಅವರ ಹೇಳಿಕೆ ಏನು? :
”ನಮ್ಮ ಕನ್ನಡದ ಚಲನಚಿತ್ರ ‘ಕಾಂತಾರ’ವು ರಾಷ್ಟ್ರಮಟ್ಟದಲ್ಲಿ ಸದ್ದು ಮಾಡುತ್ತಿರುವುದು ಖುಷಿಯ ಸಂಗತಿ. ಭೂತಕೋಲವು ಹಿಂದೂ ಸಂಸ್ಕೃತಿಗೆ ಸೇರುತ್ತದೆ ಎಂದು ನಿರ್ದೇಶಕ ರಿಷಬ್ ಶೆಟ್ಟಿಯವರು ಹೇಳಿದ್ದಾರೆ. ಇದು ನಿಜವಲ್ಲ. ನಮ್ಮ ಪಂಬದ, ನಲಿಕೆ, ಪರವರ ಬಹುಜನ ಸಂಪ್ರದಾಯಗಳು. ವೈದಿಕ ಬ್ರಾಹ್ಮಣೀಯ ಹಿಂದೂ ಧರ್ಮಕ್ಕಿಂತ ಹಿಂದಿನವು. ಮೂಲ ನಿವಾಸಿ ಸಂಸ್ಕೃತಿಗಳನ್ನು ಪರದೆ ಮೇಲೆ ಮತ್ತು ಹೊರಗೆ ಸತ್ಯದೊಂದಿಗೆ ಪ್ರದರ್ಶಿಸಬೇಕು” ಎಂದು ಟ್ವೀಟ್ ಮಾಡಿದ್ದರು.