ವಿಧಾನಸಭೆಯ ಉಪಸಭಾಪತಿ ಆನಂದ ಚಂದ್ರಶೇಖರ ಮಾಮನಿ ನಿಧನ
ಬೆಂಗಳೂರು: ಕರ್ನಾಟಕ ವಿಧಾನಸಭೆಯ ಉಪಸಭಾಪತಿ ಆನಂದ ಚಂದ್ರಶೇಖರ ಮಾಮನಿ(56) ಶನಿವಾರ ಮಧ್ಯರಾತ್ರಿ ವಿಧಿವಶರಾಗಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಬೆಳಗಾವಿ ಜಿಲ್ಲೆ ಸವದತ್ತಿ ಕ್ಷೇತ್ರದ ಶಾಸಕರಾಗಿದ್ದ ಮಾಮನಿ ಕ್ಯಾನ್ಸರ್ ನಿಂದ ಬಳಸಲುತ್ತಿದ್ದು, ಕಳೆದ ತಿಂಗಳು ಚೆನ್ನೈನಲ್ಲಿ ಚಿಕಿತ್ಸೆ ಪಡೆದಿದ್ದರು. ನಂತರ ಆರೋಗ್ಯ ಚೇತರಿಸಿಕೊಂಡಿದ್ದರೂ, ಮತ್ತಷ್ಟು ಚಿಕಿತ್ಸೆಯ ಅಗತ್ಯವಿದ್ದ ಹಿನ್ನೆಲೆಯಲ್ಲಿ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಮಧ್ಯ ರಾತ್ರಿ ನಿಧನರಾಗಿದ್ದಾರೆ.