ಕ್ರೀಡೆ

ಟ್ವೆಂಟಿ-20 ವಿಶ್ವಕಪ್ : ಪಾಕಿಸ್ತಾನ ವಿರುದ್ಧ 4 ವಿಕೆಟ್ ಅಂತರದಿಂದ ಭಾರತಕ್ಕೆ ರೋಚಕ ಜಯ । ವಿರಾಟ್ ಕೊಹ್ಲಿ ಅಮೋಘ ಬ್ಯಾಟಿಂಗ್

ಮೆಲ್ಬೋರ್ನ್: ಮಾಜಿ ನಾಯಕ ವಿರಾಟ್ ಕೊಹ್ಲಿ (ಔಟಾಗದೆ 82 ರನ್, 53 ಎಸೆತ, 6 ಬೌಂಡರಿ, 4 ಸಿಕ್ಸರ್ )ಅಮೋಘ ಬ್ಯಾಟಿಂಗ್ ನೆರವಿನಿಂದ ಭಾರತ ಕ್ರಿಕೆಟ್ ತಂಡ ಟ್ವೆಂಟಿ-20 ವಿಶ್ವಕಪ್ ನ ಸೂಪರ್-12 ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು 4 ವಿಕೆಟ್ ಅಂತರದಿಂದ ರೋಚಕವಾಗಿ ಮಣಿಸಿದೆ.

ರವಿವಾರ ನಡೆದ ಪಂದ್ಯದಲ್ಲಿ ಗೆಲ್ಲಲು 160 ರನ್ ಗುರಿ ಪಡೆದಿದ್ದ ಭಾರತವು 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ ಗೆಲುವಿನ ರನ್ ಗಳಿಸಿತು.

ಭಾರತವು 6.1 ಓವರ್ ಗಳಲ್ಲಿ 31 ರನ್ ಗೆ 4 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಆಗ ಜೊತೆಯಾದ ಕೊಹ್ಲಿ ಹಾಗೂ ಹಾರ್ದಿಕ್ ಪಾಂಡ್ಯ(40 ರನ್, 37 ಎಸೆತ)5ನೇ ವಿಕೆಟಿಗೆ 113 ರನ್ ಜೊತೆಯಾಟ ನಡೆಸಿ ತಂಡವನ್ನು ಆಧರಿಸಿದರು.ಪಾಕಿಸ್ತಾನದ ಬೌಲಿಂಗ್ ವಿಭಾಗದಲ್ಲಿ ಹಾರಿಸ್ ರವೂಫ್ (2-36) ಹಾಗೂ ಮುಹಮ್ಮದ್ ನವಾಝ್(2-42) ತಲಾ ಎರಡು ವಿಕೆಟ್ ಪಡೆದರು.

ಇದಕ್ಕೂ ಮೊದಲು ಟಾಸ್ ಸೋತು ಬ್ಯಾಟಿಂಗ್ ಮಾಡಿದ್ದ ಪಾಕಿಸ್ತಾನವು 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 159 ರನ್ ಗಳಿಸಿತ್ತು.

Leave a Reply

Your email address will not be published. Required fields are marked *

error: Content is protected !!