ಕಾಣಿಯೂರು: ಗುಂಪು ಹಲ್ಲೆ ಪ್ರಕರಣ: ಅ.28ರಂದು ಪುತ್ತೂರಿನಲ್ಲಿ ಬೃಹತ್ ಕಾಲ್ನಡಿಗೆ ಜಾಥಾ, ಪ್ರತಿಭಟನೆ-ಅಶ್ರಫ್ ಕಲ್ಲೇಗ
ಪುತ್ತೂರು: ಕಾಣಿಯೂರಿನಲ್ಲಿ ಮುಸ್ಲಿಂ ವ್ಯಾಪಾರಿಗಳ ಮೇಲೆ ನಡೆದ ಮಾರಣಾಂತಿಕ ಗುಂಪು ಹಲ್ಲೆ, ಕೊಲೆ ಯತ್ನ ಘಟನೆಯನ್ನು ಖಂಡಿಸಿ ಮತ್ತು ಸರಕಾರ ಮತ್ತು ಪೊಲೀಸ್ ಇಲಾಖೆಯ ತಾರತಮ್ಯ ಧೋರಣೆಯ ವಿರುದ್ಧ ಬೃಹತ್ ಪ್ರತಿಭಟನಾ ಜಾಥಾ ಮತ್ತು ಪ್ರತಿಭಟನಾ ಸಭೆ ಅ.28ರಂದು ಪುತ್ತೂರಿನಲ್ಲಿ ನಡೆಯಲಿದೆ ಎಂದು ದ.ಕ ಜಿಲ್ಲಾ ಮುಸ್ಲಿಂ ಯುವಜನ ಪರಿಷತ್ ಅಧ್ಯಕ್ಷ ಅಶ್ರಫ್ ಕಲ್ಲೇಗ ತಿಳಿಸಿದ್ದಾರೆ.
ಅಪರಾಹ್ನ 3-00 ಗಂಟೆಗೆ ದರ್ಬೆ ವೃತ್ತದಿಂದ ಎ.ಸಿ ಕಛೇರಿ ವರೆಗೆ ಕಾಲ್ನಡಿಗೆ ಜಾಥಾ ನಡೆಯಲಿದ್ದು ಬಳಿಕ ಸಾರ್ವಜನಿಕ ಪ್ರತಿಭಟನಾ ಸಭೆ ನಡೆಯಲಿದೆ. ಇತ್ತೀಚೆಗೆ ಮುಸ್ಲಿಂ ಸಮುದಾಯದ ವಿರುದ್ಧ ಫ್ಯಾಶಿಷ್ಟ್ ಶಕ್ತಿಗಳು ನಿರಂತರ ಅನ್ಯಾಯ, ಅಕ್ರಮ ಎಸಗುತ್ತಿದ್ದು ಅದರ ವಿರುದ್ಧ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು ಪ್ರಜ್ಞಾವಂತ ಜನತೆ ಈ ಪ್ರತಿಭಟನಾ ಜಾಥಾ ಮತ್ತು ಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಅಶ್ರಫ್ ಕಲ್ಲೇಗ ಪತ್ರಿಕಾ ಪ್ರಕಟಣೆ ಮೂಲಕ ಮನವಿ ಮಾಡಿದ್ದಾರೆ.