ಕಾಣಿಯೂರಿನಲ್ಲಿ ವ್ಯಾಪಾರಿಗಳ ಮೇಲಿನ ಗುಂಪು ಹಲ್ಲೆ ಪ್ರಕರಣ:ಮುಸ್ಲಿಂ ಯುವಜನ ಪರಿಷತ್ ಪ್ರತಿಭಟನೆಗೆ SKSSF ಬೆಂಬಲ
ಪುತ್ತೂರು: ಕಾಣಿಯೂರಿನಲ್ಲಿ ಮುಸ್ಲಿಂ ವ್ಯಾಪಾರಿಗಳ ಮೇಲೆ ನಡೆದ ಮಾರಣಾಂತಿಕ ಗುಂಪು ಹಲ್ಲೆ, ಕೊಲೆ ಯತ್ನ ಘಟನೆಯನ್ನು ಖಂಡಿಸಿ ಅ.೨೮ರಂದು ಪುತ್ತೂರಿನಲ್ಲಿ ದ.ಕ ಜಿಲ್ಲಾ ಮುಸ್ಲಿಂ ಯುವಜನ ಪರಿಷತ್ ವತಿಯಿಂದ ನಡೆಯಲಿರುವ ಜಾಥಾ ಮತ್ತು ಪ್ರತಿಭಟನಾ ಸಭೆಗೆ ಎಸ್ಕೆಎಸ್ಸೆಸ್ಸೆಫ್ ಬೆಂಬಲ ಸೂಚಿಸಿದೆ.

ಸಂತ್ರಸ್ತರಿಗೆ ಸರಿಯಾದ ನ್ಯಾಯ ಮತ್ತು ಆರೋಪಿಗಳಿಗೆ ತಕ್ಕ ಶಿಕ್ಷೆಯಾಗದಿದ್ದರೆ ಮುಂದಿನ ದಿನಗಳಲ್ಲಿ ಕಾನೂನಿನ ಚೌಕಟ್ಟಿನಡಿಯಲ್ಲಿ ಹೋರಾಟ ನಡೆಸಲಾಗುವುದು ಎಂದು ಎಸ್ಕೆಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಪ್ರಕಟನೆಯಲ್ಲಿ ತಿಳಿಸಿದೆ.