ರಾಜ್ಯ

ಹಳ್ಳಕ್ಕೆ ನುಗ್ಗಿದ ಬಸ್, 22 ಮಂದಿಗೆ ಗಾಯ

ಹನೂರು: ತಾಲ್ಲೂಕಿನ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರೆ ಮುಗಿಸಿಕೊಂಡು ಪ್ರಯಾಣಿಕರನ್ನು ಕರೆದುಕೊಂಡು ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್, ತಾಳಬೆಟ್ಟದ ಬಳಿ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ನುಗ್ಗಿದ್ದು, 22 ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.


ಅ.26ರಂದು ಬೆಳಿಗ್ಗೆ  ಘಟನೆ ನಡೆದಿದ್ದು ಬಸ್ಸಿನಲ್ಲಿ 51 ಪ್ರಯಾಣಿಕರಿದ್ದರು. ಈ ಪೈಕಿ 22 ಜನರು ಗಾಯಗೊಂಡಿದ್ದಾರೆ. ಇಬ್ಬರ ಸ್ಥಿತಿ ಗಂಭೀರವಾಗಿದ್ದು ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿಗೆ ಕರೆದೊಯ್ದಿರುವುದಾಗಿ ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!