ಕಲುಷಿತ ನೀರು ಕುಡಿದು 50ಕ್ಕೂ ಹೆಚ್ಚು ಮಂದಿ ಅಸ್ವಸ್ಥ
ಬೆಳಗಾವಿ: ರಾಮದುರ್ಗ ತಾಲ್ಲೂಕಿನ ಮುದೇನೂರು ಗ್ರಾಮದಲ್ಲಿ ಅ.26ರಂದು ಕಲುಷಿತ ನೀರು ಕುಡಿದು 50ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡಿದ್ದಾರೆ.
ಎಲ್ಲರನ್ನೂ ರಾಮದುರ್ಗದ ಸರ್ಕಾರಿ ಹಾಗೂ ವಿವಿಧ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ನೀರು ಪೂರೈಸುವ ಪೈಪ್ ಲೈನ್ ಒಡೆದು ಚರಂಡಿ ನೀರು ಸೇರಿಕೊಂಡಿದ್ದರಿಂದ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ.